ಬಿಪಿಎಲ್‌ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ; ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ (BPL) ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ‌ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಪಿಎಲ್ … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ

ಬೆಳಗಾವಿ: ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ … Continued

ರದ್ದಾದವರಿಗೆ ಅದೇ ಐಡಿಯಲ್ಲಿ 7 ದಿನದೊಳಗೆ ಬಿಪಿಎಲ್ ಕಾರ್ಡ್‌ : ಸಚಿವ ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಏಳು ದಿನದೊಳಗೆ ಅದೇ ಐಡಿಯಲ್ಲಿ ಲಾಗಿನ್‌ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್‌ ಕಾರ್ಡ್‌ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ … Continued

ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳು ಪತ್ತೆ, ರದ್ದುಗೊಳಿಸುವ ಪ್ರಕ್ರಿಯೆ ಚುರುಕು : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ನಿಯಮಾವಳಿಗೆ ವಿರುದ್ಧವಾಗಿ ಒಟ್ಟು 4,036 ಸರಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಪಡೆದಿರುವುದನ್ನು ಪತ್ತೆ ಮಾಡಲಾಗಿದೆ. ಈಗಾಗಲೇ 2,964 ಕುಟುಂಬಗಳ … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ವಿಮಾನದಲ್ಲಿ ರಾಮ ನಾಮ ಬರೆದ ಕೆ.ಎಚ್‌. ಮುನಿಯಪ್ಪ : 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ ಎಂದ ಸಚಿವರು

ನವದೆಹಲಿ: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರಲು ನಿರ್ಧರಿಸಿರುವ ವಿಚಾರ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ವಾದ ಜೋರಾಗಿದೆ. ಇದೇ ವೇಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾಮನಾಮ ಜಪ ಬರೆಯುತ್ತಿದ್ದ ವೀಡಿಯೊ ಕೂಡ ವೈರಲ್ ಆಗಿದೆ. ಕೆ.ಎಚ್.‌ ಮುನಿಯಪ್ಪ ಅವರು ಎಐಸಿಸಿ ಸಭೆ ನಿಮಿತ್ತ ನವದೆಹಲಿಗೆ ಪ್ರಯಾಣ … Continued

ಅನ್ನಭಾಗ್ಯ ಯೋಜನೆ ; ಮುಂದಿನ ತಿಂಗಳಿಂದ ಹಣದ ಬದಲು ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮುಂದಿನ ತಿಂಗಳಿಂದ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 10 ಕೆ.ಜಿ ಅಕ್ಕಿ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ … Continued

ಹೊಸ ಬಿಪಿಎಲ್-ಎಪಿಎಲ್ ಕಾರ್ಡ್‌ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ: ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ

ಬೆಂಗಳೂರು : ಸದ್ಯಕ್ಕೆ ಬಿಪಿಎಲ್ ಕಾರ್ಡ್​​ ಹಾಗೂ ಎಪಿಎಲ್ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅನ್ನಭಾಗ್ಯ ಯೋಜನೆಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ … Continued

ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನಿಟ್ಟುಕೊಂಡು ಹೋದರೆ ಚುನಾವಣೆಯಲ್ಲಿ ಗೆಲುವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಸಿದ್ಧರಾಮಯ್ಯ ಪ್ರಭಾವಿ … Continued