ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಖಾನಾಪುರ | ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳ ಸಾವು : ತನಿಖೆಗೆ ಆದೇಶ

ಬೆಳಗಾವಿ : ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಗದ್ದೆಯಲ್ಲಿ ಎರಡು ಆನೆಗಳು ಏಕಕಾಲದಲ್ಲಿ ಸಾವಿಗೀಡಾಗಿರುವುದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಬಳಿ ಕಂಡುಬಂದಿದೆ ಎಂದು ವರದಿಯಾಗಿದೆ. ಮಾಹಿತಿಗಳ ಪ್ರಕಾರ,ಸುಳೇಗಾಳಿ ಗ್ರಾಮದ ರೈತ ಗಣಪತಿ ಗುರವ ಅವರು ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ತಮ್ಮ ಹೊಲದ ಸುತ್ತಲೂ ಸೌರಶಕ್ತಿ … Continued

ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ … Continued

ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಸಿ.ಟಿ. ರವಿ ಪ್ರಕರಣ | ಕರ್ತವ್ಯ ಲೋಪದ ಆರೋಪ ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್‌

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕರಣದಲ್ಲಿ (CT Ravi Case) ಮೊದಲ ತಲೆದಂಡವಾಗಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಸಿ.ಟಿ ರವಿ ಅವರನ್ನು ಬಂಧಿಸಿದ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಗೂಗಲ್ ಮ್ಯಾಪ್ ನಂಬಿ ದಾರಿತಪ್ಪಿ ಖಾನಾಪುರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ…!

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿ ಅವರು ರಾತ್ರಿಯಿಡೀ ಕಾಡಿನಲ್ಲೇ ಕಳೆದ ಘಟನೆ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿದ್ದ ಹಾದಿ ತಪ್ಪಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಬಿಹಾರದ … Continued

ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಯಿಂದ ತುಂಡಾಯ್ತು ರೈತನ ಕಾಲು

ಬೆಳಗಾವಿ : ಖಾನಾಪುರ ತಾಲೂಕಿನ ಮಾನ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಕರಡಿ ದಾಳಿಯಿಂದ ರೈತನ ಕಾಲು ತುಂಡಾಗಿದೆ. ರೈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾನ ಗ್ರಾಮದ ಸಖಾರಾಮ ಗಾಂವಕರ (62) ದಾಳಿಗೆ ಒಳಗಾದ ರೈತರಾಗಿದ್ದಾರೆ. ಅವರು ಪತ್ನಿಯೊಂದಿಗೆ ಜಾನುವಾರುಗಳ ಸಮೇತ ತಮ್ಮ ಹೊಲಕ್ಕೆ ಹೊರಟಿದ್ದರು. ದಾರಿಯಲ್ಲಿ ಕರಡಿ ಎದುರಾಗಿದೆ. ಅದನ್ನು ಕಂಡ ಸಖಾರಾಮ … Continued

ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮಹಮ್ಮದ್ ಆಲಿ ಹಲಸಿಕರ ಮತ್ತು ಮೌಲಾಲಿ ಹಲಸಿಕರ … Continued