ಮಡಿಕೇರಿ : ರೆಸಾರ್ಟ್‌ನಲ್ಲಿ ಮಗು ಸೇರಿ ಮೂವರು ಶವವಾಗಿ ಪತ್ತೆ

ಮಡಿಕೇರಿ: ಕೇರಳದಿಂದ ಪ್ರವಾಸಕ್ಕೆ ಬಂದಿದ್ದ ದಂಪತಿ, ಮಗಳ ಮೃತದೇಹ ಮಡಿಕೇರಿ ತಾಲೂಕಿನ ಕಡಗದಾಳು ಹೋಮ್‌ಸ್ಟೇನಲ್ಲಿ ಶನಿವಾರ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿದುಬಂದಿಲ್ಲ. ಮೃತರನ್ನು ಕೇರಳದ ಕೊಲ್ಲಂ ನಿವಾಸಿ ವಿನೋದ್ (41), ಝುಬಿ ಅಬ್ರಹಾಂ (37), ಜೋಹನ್ (11) ಎಂದು ಹೇಳಲಾಗಿದೆ. ತಮ್ಮ ಮಗಳು ಜೋಹನ್‌ ಅವಳನ್ನು ಮೊದಲು … Continued

ಕುಶಾಲನಗರ: ನಿಂತಿದ್ದ ಕಾರಿನಲ್ಲಿ ವೈದ್ಯ ಶವವಾಗಿ ಪತ್ತೆ

ಮಡಿಕೇರಿ : ವೈದ್ಯರೊಬ್ಬರ ಶವ ಕುಶಾಲನಗರದ ಆನೆಕಾಡಿನ ಕಾರಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಡಾ. ಸತೀಶ (47) ಮೃತಪಟ್ಟ ವೈದ್ಯರು ಎಂದು ಗುರುತಿಸಲಾಗಿದೆ. ಇವರ ಹೆಸರು ರಾಜ್ಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಭ್ರೂಣ ಹತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು … Continued

ಕೊಡಗು : ಸಾಕು ನಾಯಿ ಕಚ್ಚಿದರೆ ಮಾಲೀಕರಿಗೆ ಜೈಲು, ದಂಡ ; ಪೊಲೀಸರ ವಾರ್ನಿಂಗ್‌

ಮಡಿಕೇರಿ : ನಾಯಿಗಳನ್ನು ಸಾಕುವ ಮನೆಯ ಮಾಲೀಕರಿಗೆ ಕೊಡಗು ಜಿಲ್ಲಾ ಪೊಲೀಸರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಸಾಕು ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಅದರ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪೊಲೀಸರು, ಮನೆಯಲ್ಲಿ ನಾಯಿಗಳನ್ನು ಎಚ್ಚರಿಕೆಯಿಂದ ಸಾಕದೆ ಮನೆಗೆ ಬರುವವರ ಮೇಲೆ ದಾಳಿ ನಡೆಸಿದರೆ … Continued

ಕೊಡಗು: ಇಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

  ಕೊಡಗು: 24 ತಾಸಿನೊಳಗೆ ಇಬ್ಬರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು, ಮಂಗಳವಾರ (ಫೆ.14) ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕೆಲವು ದಿನಗಳಿಂದ ಕೊಡಗಿನಲ್ಲಿ ಜನರು ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. … Continued

ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು, 24 ತಾಸಿನಲ್ಲಿ ಇದು 2ನೇ ಪ್ರಕರಣ

ಮಡಿಕೇರಿ: 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿ(Tiger Attack)ಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಲಿ ದಾಳಿಗೆ ಸೋಮವಾರ ಬೆಳಿಗ್ಗೆ ಕೊಡಗು ಹಾಗೂ ಕೇರಳ ಗಡಿಭಾಗದ ಪಲ್ಲೇರಿ ಗ್ರಾಮದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕೃಷಿ ಕಾರ್ಮಿಕ ರಾಜು (75) ಎಂದು ಗುರುತಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿದೆ. … Continued

ಹುಲಿ ದಾಳಿಗೆ ಹದಿಹರೆಯದ ಕಾರ್ಮಿಕ ಸಾವು

ಮಡಿಕೇರಿ: ನರಭಕ್ಷಕ ಹುಲಿ ದಾಳಿಗೆ ಸಿಲುಕಿ ಹದಿಹರೆಯದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಕೊಡಗು-ಕೇರಳ ಗಡಿಭಾಗವಾದ ಚೂರಿಕಾಡು ಬಳಿ ನಡೆದ ವರದಿಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ಹುಲಿ ದಾಳಿಗೆ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆ ಈತ ಕಾಫಲಿ ಪ್ಲಾಂಟ್‌ನಲ್ಲಿ ತನ್ನ ದೈನಂದಿನ ಕೆಲಸದಲ್ಲಿ ನಿರತನಾಗಿದ್ದಾಗ ತೋಟದಲ್ಲಿದ್ದ ಹುಲಿ … Continued

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ರಾಜ್ಯ ವಿಧಾನಸಭೆ ವಿಪಕ್ಷ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಸಂಬಂಧಿಸಿದಂತೆ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ … Continued

ಸಿದ್ದರಾಮಯ್ಯ ಕಾರಿಗೆ ಘೇರಾವ್: ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ, ಕಾರಿನೊಳ ಸಾವರ್ಕರ್ ಫೋಟೋ ಹಾಕಿದರು

ಮಡಿಕೇರಿ : ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್  ಹಾಕಿ ಘೋಷಣೆ ಕೂಗಿದ್ದಾರೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿ … Continued

ಪ್ರೇಯಸಿ-ಸಹಚರನಿಗೆ ಚಾಕುವಿನಿಂದ ಇರಿದ ಪ್ರೇಮಿ

ಮಡಿಕೇರಿ: ಕೊಡಗು ಸಮೀಪದ ಕುಶಾಲನಗರದ ಜನಪ್ರಿಯ ಪ್ರವಾಸಿ ತಾಣ ನಿಸರ್ಗಧಾಮದಲ್ಲಿ ತ್ರಿಕೋನ ಪ್ರೇಮ ರಕ್ತಪಾತದಲ್ಲಿ ಅಂತ್ಯವಾಗಿದೆ. ಕೊಪ್ಪ ಗ್ರಾಮದ ವಿಜಯಕುಮಾr (22) ಎಂಬಾತ ತನ್ನ ಗೆಳತಿ ಮತ್ತು ಆಕೆಯ ಸಹಚರನಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕುಶಾಲನಗರದ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್, ಮಾದಪಟ್ಟಣದ ಕಾಲೇಜು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, … Continued

ಕೊಡಗಿನಲ್ಲಿ ಭಾರೀ ಶಬ್ದದೊಂದಿಗೆ ಮತ್ತೆ ಭೂಕುಸಿತ :18 ಕುಟುಂಬಗಳ ಸ್ಥಳಾಂತರ

ಕೊಡಗು: ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಮತ್ತೆ ಭೂ ಕುಸಿತ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮದೆನಾಡು ಸುತ್ತಮುತ್ತ ಇಂದು, ಶನಿವಾರ ಬೆಳಿಗ್ಗೆ ಕಂಪನದ ಅನುಭವ ಉಂಟಾಗಿದೆ. ಇಂದು (ಜುಲೈ 23) ಮಡಿಕೇರಿ ತಾಲೂಕಿನ ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಆಗಿದ್ದು, ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಕೆಸರು ಕೊಚ್ಚಿ … Continued