ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ

ಮಡಿಕೇರಿ/ಮಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದ್ದು, ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿಯೂ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗಿದೆ. ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ … Continued

ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಸೋಮವಾರ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ  ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿಯನ್ನು ಗಣೇಶ (29) ಗುರುತಿಸಲಾಗಿದೆ. ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ … Continued

ಕೊನೆಗೂ ಕೊಡಗು ಬಾಲಕಿ ಕೈಸೇರಿದ ಕಳೆದುಹೋಗಿದ್ದ ಅಮ್ಮನ ನೆನಪಿನ ಮೊಬೈಲ್..!

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದ ಪುಟ್ಟ ಬಾಲಕಿ ಹೃತಿಕ್ಷಾ ಪ್ರಾರ್ಥನೆ ಕೊನೆಗೂ ಫಲಿಸಿದೆ. ಕೋವಿಡ್‌ನಿಂದ ಮೃತಪಟ್ಟ ತಾಯಿಯ ನೆನಪು ಇರುವ ಮೊಬೈಲ್ ಮೂರು ತಿಂಗಳ ನಂತರ ಆಕೆಯ ಕೈ ಸೇರಿದೆ. ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹೃತಿಕ್ಷಾ ತಾಯಿ ಮೇ 16ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆದರೆ ತಾಯಿಯ ಜೊತೆಗಿದ್ದ ಮೊಬೈಲ್ ಕಳೆದುಹೋಗಿತ್ತು. ತಾಯಿಯ ನೆನಪು … Continued

ಕೊಡಗು: ನರಹಂತಕ ಹುಲಿ ಕಂಡಲ್ಲಿ ಗುಂಡು ಆದೇಶ

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ದಾಳಿ ನಡೆಸಿ ನಾಲ್ವರು ಜನರನ್ನು ಕೊಂದ ಹುಲಿಗೆ ಕಂಡಲ್ಲಿ ಗುಂಡು ಹಾರಿಸುವಂತೆ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬೆಲ್ಲೂರು ಗ್ರಾಮದಲ್ಲಿ ಹುಲಿ ದಾಳಿಗೆ ಬಾಲಕ ರಂಗಸ್ವಾಮಿ (೮) ಮೃತಪಟ್ಟಿದ್ದು, ತೋಟದ ಕಾರ್ಮಿಕ ಗಂಭೀರ ಗಾಯಗೊಂಡ ನಂತರ ಆದೇಶ ಮಾಡಲಾಗಿದೆ. ವಿರಾಜ್‌ಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ವಿಧಾನಸಭೆಯಲ್ಲಿ, … Continued

ನರ ಹಂತಕ ಹುಲಿ ಹಿಡಿಯಲು ೧೫೦ ಅರಣ್ಯ ಸಿಬ್ಬಂದಿ: ಆದರೂ ಕಾಣಿಸದ ಹುಲಿ

ಮಡಿಕೇರಿ: ನರ ಹಂತಕ ವ್ಯಾಘ್ರನ ಸೆರೆ ವಿಳಂಬವಾಗುತ್ತಿದ್ದು, ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಈಗಾಗಲೇ ಮೂರು ಜೀವಗಳನ್ನು ಬಲಿ ಪಡೆದಿರುವ ಗಂಡು ಹುಲಿ ಯಾರ ಕಣ್ಣಿಗೂ ಬೀಳುತ್ತಿಲ್ಲ. ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಸೋಮವಾರ ಬೆಂಗಳೂರಿನಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ವನ್ಯಜೀವಿ ವಿಭಾಗದ … Continued

ಕೇರಳದಲ್ಲಿ ಕೊರೊನಾ ಕೇಕೆ: ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳಕ್ಕೆ ಹೋಗಿ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಫೆ.17 ರಂದು ಒಂದೇ ದಿನ 4,892 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಲಿ ಈಗ 60,803ಕ್ಕೆ ಏರಿದಂತಾಗಿದೆ. 746 … Continued