ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ : ಕೋಡಿಮಠ ಶ್ರೀಗಳಿಂದ ಮತ್ತೆ ಭವಿಷ್ಯ

ರಾಯಚೂರು: ಮುಖ್ಯಮಂತ್ರಿ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವೆ ತಿಕ್ಕಾಟ ನಡೆಯುತ್ತಿರುವ ಬೆನ್ನಲ್ಲೇ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಸಂಬಂಧ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಸೋಮವಾರ ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶ್ರೀಗಳು ಬಜೆಟ್‌ ವರೆಗೂ ಯಾವುದೇ … Continued

ರಾಜ್ಯದಲ್ಲಿ ಅತಿವೃಷ್ಟಿ , ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು : ಕೋಡಿಮಠ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕ್ರೋಧಿ ನಾಮ ಸಂವತ್ಸರದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು … Continued