ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ … Continued

ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನಿಟ್ಟುಕೊಂಡು ಹೋದರೆ ಚುನಾವಣೆಯಲ್ಲಿ ಗೆಲುವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಸಿದ್ಧರಾಮಯ್ಯ ಪ್ರಭಾವಿ … Continued

ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು. ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, … Continued

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್‌ ರೆಡ್ಡಿ ಬರ್ಬರ ಹತ್ಯೆ

ಕೋಲಾರ: ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ. ಜಗನ್ಮೋಹನ್ ರೆಡ್ಡಿ (45) ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪ್ತ. ಸತತ ಎರಡನೇ ಬಾರಿ ಪಕ್ಷೇತರ ನಗರ ಸಭೆ … Continued

ಕೋಲಾರ: ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ, ಪೊಲೀಸರಿಂದ ಲಾಠಿ ಪ್ರಹಾರ

ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ … Continued

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. ಮೃತರನ್ನು ನವೀನ(32), ರಾಜೇಂದ್ರ(32), ಮೋಹನ್(28) ಎಂದು ಹೇಳಲಾಗಿದೆ. ಇವರೊಂದಿಗೆ ಬಂದಿದ್ದ ಮತ್ತೊಬ್ಬ ಊಟ ತರಲು ಹೋಗಿದ್ದ ಕಾರಣಕ್ಕೆ ಬದುಕುಳಿದಿದ್ದಾನೆ ಎನ್ನಲಾಗಿದೆ. ಕೆರೆ ಬಳಿ ಪಾರ್ಟಿ ಮಾಡಿದ … Continued

ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲುತೂರಾಟ

ಕೋಲಾರ: ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಸಮಯದಲ್ಲಿ … Continued

ಜೈಲ್‌ ಭರೋಗೆ ಮುಂದಾದ ಸಾರಿಗೆ ನೌಕರರು: ಲಘು ಲಾಠಿ ಪ್ರಹಾರ

ಕೋಲಾರ: ಜೈಲ್ ಭರೋ ಚಳವಳಿ ನಡೆಸಲು ಮುಂದಾದ ಸಾರಿಗೆ ನೌಕರರ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೋಲಾರ ಹೊರವಲಯದ ಸಂಗೊಂಡಹಳ್ಳಿ ಬಳಿ ನೂರಾರು ಸಾರಿಗೆ ನೌಕರರು ಜಮಾವಣೆಗೊಂಡು ಪ್ರತಿಭಟನೆ ನಡೆಸಲು ಮುಂದಾದಾಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ. ಚಳವಳಿ ಕೈ ಬಿಡಿ … Continued

ಕೋಲಾರ: ಅನಾಥಾಶ್ರಮದ 26 ವಿದ್ಯಾರ್ಥಿಗಳು , ಗಾರ್ಮೆಂಟ್‌ ಫ್ಯಾಕ್ಟರಿ 33 ಕಾರ್ಮಿಕರಿಗೆ ಕೊರೊನಾ ಸೋಂಕು..!

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಎರಡು ಕೊರೊನಾ ಕ್ಲಸ್ಟರ್‌ಗಳು ವರದಿಯಾಗಿದ್ದು, ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮದ 26 ವಿದ್ಯಾರ್ಥಿಗಳು ಹಾಗೂ ಬೆಂಗಳೂರು-ನರಸಪುರ ಹೆದ್ದಾರಿಯಲ್ಲಿರುವ ಫ್ಯಾಕ್ಟರಿಯ 33 ಗಾರ್ಮೆಂಟ್ ಕಾರ್ಮಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅನಾಥಾಶ್ರಮದ ಎಲ್ಲಾ ವಿದ್ಯಾರ್ಥಿಗಳು ಪ್ರತ್ಯೇಕರಾಗಿದ್ದಾರೆ. ಬಂಗಾರ್‌ಪೇಟ್‌ದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮಕ್ಕೆ … Continued

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ. ಅವರು ಶಾಸಕರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು. ರಮೇಶಕುಮಾರ, ನಂಜೇಗೌಡ, ನಜೀರ್‌ ಅಹ್ಮದ್‌ ಸೇರಿದಂತೆ ಪಕ್ಷದ ಮುಖಂಡರು ಕೋಲಾರದಿಂದ … Continued