ಕೊಪ್ಪ | ಹಲ್ಲುಗಳನ್ನು ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ

ಚಿಕ್ಕಮಗಳೂರು : ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಘ್ನೇಶ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ ಎನ್ನಲಾಗಿದೆ. … Continued

ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗನ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ಹರ್ಷ ಸಹೋದರಿ

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ 2015ರಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಅವರ ಮಗ ಯಶಸ್ ನ ಓದಿನ ಜವಾಬ್ದಾರಿಯನ್ನು ಇತ್ತೀಚೆಗೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಸಹೋದರಿ ವಹಿಸಿಕೊಂಡಿದ್ದಾರೆ. ಯಶಸ್ ವಾಸವಿರುವ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಆತನ ಅಜ್ಜಿ ಮನೆಗೆ ಭೇಟಿ ನೀಡಿದ ಹರ್ಷ ಸಹೋದರಿ ಅಶ್ವಿನಿ, ಆತನ ಓದಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. … Continued