ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ.‌ ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ‌ ಕುಕನೂರು … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಬಸ್‌ ನಿಲ್ಲಿಸಲಿಲ್ಲವೆಂದು ಕೋಪದಿಂದ ಬಸ್ಸಿಗೆ ಕಲ್ಲೆಸೆದ ಮಹಿಳೆಗೆ 5 ಸಾವಿರ ದಂಡ…!

ಕೊಪ್ಪಳ: ಕೊಪ್ಪಳದಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್‌ಗಳು ತಾಲೂಕಿನ ಹೊಸ ಲಿಂಗಾಪುರ (ಹುಲಿಗಿ ಕ್ರಾಸ್‌) ಬಳಿ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಮಹಿಳೆಯೊಬ್ಬರು ಸರ್ಕಾರಿ ಬಸ್‌ಗೆ ಕಲ್ಲು ತೂರಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಭಾನುವಾರ ಈ ಘಟನೆ ನಡೆದಿದ್ದು, ಬಸ್‌ನ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರ ಸಮೇತ … Continued

ಗಂಗಾವತಿ: ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ … Continued

ಕಂಟೇನರ್​ಗೆ ಹಿಂಬದಿಯಿಂದ ಗುದ್ದಿದ ಕಾರು: ಮೂವರ ಸಾವು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಇಂದು, ಮಂಗಳವಾರ ಬೆಳಗಿನ ಜಾವ ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ಪ್ರವೀಣಕುಮಾರ ಭೋಜಪ್ಪ (27), ಸುರೇಶ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಎಂದು ಗುರುತಿಸಲಾಗಿದೆ. ಮೃತರು ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ. ಇವರು ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದಾಗ … Continued

ವಿದ್ಯುತ್​ ಬಿಲ್ ವಸೂಲಿಗೆ ಹೋದ ಲೈನ್ ಮ್ಯಾನ್‌ಗೆ ಚಪ್ಪಲಿಯಿಂದ ಹಲ್ಲೆ..!

ಕೊಪ್ಪಳ: 200 ಯುನಿಟ್ ಕರೆಂಟ್ ಉಚಿತ ಕೊಡುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್‌ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ಹಲವೆಡೆ ಜನ ವಿದ್ಯುತ್‌ ಬಿಲ್‌ ಕಟ್ಟುವುದಿಲ್ಲ ಎಂದು ಹೇಳುತ್ತಿದ್ದಾರೆ. ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಸಂಗ್ರಹ ಮಾಡಲು ಬಂದ ಲೈನ್‌ ಮ್ಯಾನ್‌ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿದ್ಯುತ್​ … Continued

ಸೋನಿಯಾ ಗಾಂಧಿ ವಿಷಕನ್ಯೆಯೇ ? : ಖರ್ಗೆ ಹೇಳಿಕೆ ಬಗ್ಗೆ ಯತ್ನಾಳ​ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಪ್ರಧಾನಿ ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿ ನೋಡಿದ್ದರೆ ಸತ್ತು ಹೋಗುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಈಗ ಸೋನಿಯಾ ಗಾಂಧಿ ಕುರಿತು ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನವರು … Continued

ರಾಸಲೀಲೆ ವೀಡಿಯೋ ವೈರಲ್ : ದೂರು ದಾಖಲಾದ ಬೆನ್ನಿಗೇ ಶಿಕ್ಷಕನ ಬಂಧನ

ಕೊಪ್ಪಳ: ಅಕ್ಕಪಕ್ಕದ ಮಹಿಳೆಯರೊಂದಿಗೆ ಸರಸವಾಡಿ, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಶಿಕ್ಷಕ ಅಜರುದ್ದೀನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಗಾಪುರ ಗ್ರಾಮದ ಶಿಕ್ಷಕ ಅಜರುದ್ದೀನ್ ಮಹಿಳೆಯರು ಮತ್ತು ಮಕ್ಕಳನ್ನು ಕಾಮದಾಟಕ್ಕೆ ಬಳಸಿಕೊಂಡಿದ್ದ ವೀಡಿಯೋ ವೈರಲ್ ನಂತರ ವೀಡಿಯೋದಲ್ಲಿದ್ದಳು ಎಂದು ಹೇಳಲಾದ ಮಹಿಳೆ ಅಜರುದ್ದೀನ್ ವಿರುದ್ಧ ದೂರು ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸ್ … Continued

ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಗೆ ನಾವು ವಿರೋಧ ಮಾಡುವುದಿಲ್ಲ, ಭಗವದ್ಗೀತೆ ದೇಶದ ಅಸ್ಮಿತೆ: ಡಿಕೆಶಿ

ಕೊಪ್ಪಳ: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ನಾವು ವಿರೋಧ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದರು. ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿದ್ದೇ ಕಾಂಗ್ರೆಸ್ ಪಕ್ಷ. ದೂರದರ್ಶನದ … Continued