ಚನ್ನಪಟ್ಟಣದ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗುರುವಾರ(ಆಗಸ್ಟ್ 15) ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನಾನೇ ಅಭ್ಯರ್ಥಿ’ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ … Continued

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ … Continued

ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued

ಪರಿಷತ್ ಚುನಾವಣೆ: ಕಾಂಗ್ರೆಸ್ಸಿನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ‌ರಾಜ್ಯದಲ್ಲಿ ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ … Continued

ಕೆಪಿಸಿಸಿ ಪುನರ್ರಚನೆ : 7 ಜಿಲ್ಲಾಧ್ಯಕ್ಷರು, 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕವನ್ನೂ ಮಾಡಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ ಬಾಬು ಅವರನ್ನು ನೇಮಕ ಮಾಡಲಾಗಿದ್ದು, ವಿನಯ … Continued

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತನಾಡಿದ್ರೆ ಪಕ್ಷದ ಯಾರೇ ಆದ್ರೂ ಶಿಸ್ತು ಕ್ರಮ : ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ … Continued

ಬಜೆಟ್‌ನಲ್ಲಿ ಮೈಸೂರಿಗೆ ಸಿಕ್ಕಿದ್ದು ಚಿಪ್ಪು ಮಾತ್ರ!: ಕೆಪಿಸಿಸಿ ವಕ್ತಾರ ಲಕ್ಷ್ಮಣ ಟೀಕೆ

ಬಜೆಟ್‌ನಲ್ಲಿ ಮೈಸೂರನ್ನು ಕಡೆಗಣಿಸಲಾಗಿದ್ದು, ಈ ಬಾರಿ ಮೈಸೂರಿಗೆ ಸಿಕ್ಕಿದ್ದು ಚಿಪ್ಪು ಮಾತ್ರ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ ಹೇಳಿದ್ದಾರೆ. ವಿಮಾನ ನಿಲ್ದಾಣ ಹಾಗೂ ರೈಲ್ವೆ ಟರ್ಮಿನಲ್‌ಗೆ ರಾಜ್ಯ ಸರಕಾರದಿಂದ ಹಣ ಬರಲಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದರು, ಆಗ ನಾನು ಬಜೆಟ್‌ನಲ್ಲಿ ಮೈಸೂರಿಗೆ ೧೦೦ ಕೋಟಿ ರೂ. ತರಲಿ ಸಾಕು ಎಂದು ನಾನು ಸವಾಲು ಹಾಕಿದ್ದೆ. … Continued

ಕಾಂಗ್ರೆಸ್‌ನ ಜನಧ್ವನಿ ಯಾತ್ರೆ ಆರಂಭ, ೧೦೦ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪೂರ್ವಭಾವಿಯಾಗಿ ಬುಧವಾರದಿಂದ ಜನಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ದೇವನಹಳ್ಳಿಯಲ್ಲಿ ಜನಧ್ವನಿ ಯಾತ್ರೆ ಆರಂಭಗೊಂಡಿದ್ದು, ಬೆಳಿಗ್ಗೆ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ … Continued