ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ನವದೆಹಲಿ: ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಅವರನ್ನು ಕೆಪಿಸಿಸಿ ನೂತನ … Continued

ಡಿಕೆ ಶಿವಕುಮಾರ ಉತ್ತರಾಧಿಕಾರಿ ಯಾರು? ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸತೀಶ ಜಾರಕಿಹೊಳಿ ಫ್ರಂಟ್‌ ರನ್ನರ್..?

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (KPCC)ಯ  ಪುನರ್ರಚನೆಗೆ ಹೈಕಮಾಂಡ್ ಮುಂದಾಗಿದೆ. ಡಿ.ಕೆ. ಶಿವಕುಮಾರ  ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿರುವುದರಿಂದ ಅವರಿಂದ ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಇದೀಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ … Continued

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದಲೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್ ಅಮಾನತು

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ … Continued

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಚನ್ನಪಟ್ಟಣದ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗುರುವಾರ(ಆಗಸ್ಟ್ 15) ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನಾನೇ ಅಭ್ಯರ್ಥಿ’ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ … Continued

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ … Continued

ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued