ಕೆಪಿಎಸ್‌ಸಿ ನೇಮಕಾತಿ ಹಗರಣ: ಎಸ್‌ಐಟಿ ತಂಡದಲ್ಲಿ ಬದಲಾವಣೆಗೆ ಸುಪ್ರೀಂ ಕೋರ್ಟ್‌ ಅನುಮತಿ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಲ್ಲಿ(ಎಸ್‌ಐಟಿ) ಬದಲಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ. ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ರಚನೆಯಾಗಿರುವ ಈ ಎಸ್‌ಐಟಿಗೆ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಅಲೋಕಕುಮಾರ ನೇತೃತ್ವ ವಹಿಸಿದ್ದು, ಪೊಲೀಸ್‌ ಉಪ ಮಹಾನಿರ್ದೇಶಕಿ (ಡಿಐಜಿ) ದಿವ್ಯಾ ಗೋಪಿನಾಥ ಕೂಡ … Continued

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಸಾಹುಕಾರನನ್ನು ಬಂಧಿಸಿದ ಇ.ಡಿ.

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ನಿವಾಸದ ಮೇಲೆ ಎರಡನೇ ಬಾರಿ ಶೋಧ ಕಾರ್ಯಾಚರಣೆ ನಡೆಸಿ, ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ ; ಹೈಕೋರ್ಟ್​​ನಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ (KPSC) ಮೂಲಕ ಪಶುವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತನಿಖೆ ಆರಂಭವಾದ ದಿನದಿಂದ 100 ದಿನಗಳೊಳಗೆ ಅಂತಿಮ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ಅಲ್ಲದೆ, ತನಿಖೆ ಪ್ರಾರಂಭವಾದ … Continued

ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ, ಮಧ್ಯವರ್ತಿಯನ್ನು ವಶಕ್ಕೆ ಪಡೆದ ಇ.ಡಿ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಜಾರಿ ನಿರ್ದೇಶನಾಲಯ(EDವು, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಹಾಗೂ ಪ್ರಮುಖ ಮಧ್ಯವರ್ತಿ ಬಸವರಾಜ ಕನ್ನಾಳೆ ಅವರನ್ನು ಬಂಧಿಸಿದೆ. ನಾಲ್ಕು ದಿನಗಳ ವಿಚಾರಣೆ ಬಳಿಕ ಇಬ್ಬರನ್ನೂ ಇ.ಡಿ.( (ED) … Continued

ಕೆಪಿಎಸ್‌ಸಿ ನೇಮಕಾತಿ ಹಗರಣ: ಮೊದಲ ತಲೆದಂಡ, ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ಅಮಾನತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಆದೇಶದಲ್ಲಿ, ʼಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1969ರ ನಿಯಮ 3(2) ಮತ್ತು 3(3)ʼರ ಅಡಿಯಲ್ಲಿ ಜ್ಞಾನೇಂದ್ರಕುಮಾರ ಅವರನ್ನು … Continued

ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಎಸ್. ಸಾಹುಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು … Continued

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ : 21 ಕಡೆ ಇ.ಡಿ. ದಾಳಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ  ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. .ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ … Continued

ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿಯ ವಿರುದ್ಧ ಕರ್ನಾಟಕ ಹೈಕೋರ್ಟ್ ಸೋಮವಾರ ಕಿಡಿಕಾರಿತು. ಹಿಂದುಳಿದ ವರ್ಗಗಳ 3ಬಿ ಕೆಟಗರಿ ಕೋಟಾದಡಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ … Continued

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ … Continued

ಕೆ ಪಿ ಎಸ್‌ ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯನ್ನು (KAS Mains exam) ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಆಯೋಗವು ಫೆ.13ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಿತ್ತು ಮಾರ್ಚ್‌ 28, 29, ಏಪ್ರಿಲ್ 1, ಮತ್ತು 2ರಂದು ಪರೀಕ್ಷೆ ನಡೆಸಲಾಗುವುದು … Continued