ಸ್ಥಿರಾಸ್ತಿ ಪರಿಷ್ಕೃತ ಮಾರ್ಗಸೂಚಿ ದರ ಅಕ್ಟೋಬರ್‌ 1ರಿಂದ ಜಾರಿ: ಆಗಲಿದೆ ಆಸ್ತಿ ನೋಂದಣಿ ದುಬಾರಿ

ಬೆಂಗಳೂರು : ರಾಜ್ಯಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿರಲಿಲ್ಲ ಎಂದು ತಿಳಿಸಿದರು. … Continued