ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ : ನಾಪತ್ತೆಯಾಗಿದ್ದ ಟ್ರಕ್ ನದಿಯೊಳಗಿರುವ ಬಗ್ಗೆ ಸಿಕ್ಕ ಸುಳಿವು ; ಸಚಿವರಿಂದ ಟ್ವೀಟ್‌

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಇನ್ನೂ ನಾಪತ್ತೆಯಾಗಿರುವ ಇಬ್ಬರ ಶೋಧಕ್ಕೆ ಸೇನೆ ಮತ್ತು ಎನ್.ಡಿ.ಆರ್ ಎಫ್ ತಂಡ ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಮಾಡಿದ್ದು, ಇದರ ಮಧ್ಯೆಯೇ ಟ್ರಕ್  ಒಂದು ಗಂಗಾವಳಿ ನದಿ ನೀರಿನಲ್ಲಿ ಮುಳುಗಿರುವ ಸಾಧ್ಯತೆಯ ಸುಳಿವು ಸಿಕ್ಕಿದೆ. ಈ ಬಗ್ಗೆ ಕಂದಾಯ … Continued

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ; ಸಿಎಂಗೆ ಶಿಫಾರಸು

ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬರ ಘೋಷಣೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು … Continued

ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ರಾಜ್ಯಾದ್ಯಂತ ಕಾವೇರಿ -2 ತಂತ್ರಾಂಶ ಜಾರಿ ; `ಆಸ್ತಿ ನೋಂದಣಿ’ ಮತ್ತಷ್ಟು ಸುಲಭ

ಬೆಂಗಳೂರು : ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಏಪ್ರಿಲ್​ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 251 ನೋಂದಣಿ ಕಚೇರಿಗಳಲ್ಲಿ ಇಂದು, ಸೋಮವಾರ (ಜೂನ್‌ 19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ. ಎಲ್ಲ ದಾಖಲೆಗಳನ್ನು ಕಾವೇರಿ-2ರಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ … Continued

`ಗೃಹ ಲಕ್ಷ್ಮೀ’ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ ಸ್ವೀಕಾರಕ್ಕೆ ಚಿಂತನೆ, ವಾರದೊಳಗೆ ಆ್ಯಪ್‌ ಸಿದ್ಧ : ಕೃಷ್ಣಬೈರೇಗೌಡ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆಯನ್ನು ಸುಲಭವಾಗಿಸಲು ರಾಜ್ಯ ಸರ್ಕಾರವು ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued