ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌

ಬೆಂಗಳೂರು : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ(CWMA)ವು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ನೀಡಿರುವ ನಿರ್ದೇಶನವನ್ನು ಖಂಡಿಸಿ, ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ … Continued

ಬರದ ನಡುವೆ ರಾಜ್ಯಕ್ಕೆ ಆಘಾತ : ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ/ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಮಿತಿಯು ಎರಡೂ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ : ಹೈಕೋರ್ಟ್‌ ಆದೇಶ

ಬೆಂಗಳೂರು : ಕೃಷ್ಣರಾಜ ಸಾಗರ ಜಲಾಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ/ಕ್ವಾರಿ ಚಟುವಟಿಕೆಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ಗಣಿಗಾರಿಕೆಗೆ ಪರವಾನಗಿ ನೀಡಲು ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿದ ಹಾನಿಯ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಷರತ್ತು ವಿಧಿಸಿರುವುದನ್ನು ಪ್ರಶ್ನಿಸಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿ.ಜಿ. ಕುಮಾರ … Continued