ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಬಸ್ಸಿನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು…!

ಬೆಳಗಾವಿ : ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಹೊಡೆದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಏರಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್‌ ಸೀಟ್ ಬಗ್ಗೆ ಪರಸ್ಪರರು ತಾವು ಹಿಡಿದಿದ್ದೇವೆ ಎಂದು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಆರಂಭದಲ್ಲಿ … Continued

ಕೆಎಸ್ ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ ; ಶೇ.15ರಿಂದ 20ರಷ್ಟು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಕೆಎಸ್ ಆರ್‌ಟಿಸಿ ಬಸ್ಸಿನ ಟಿಕೆಟ್ ದರದಲ್ಲಿ ಶೇ.15ರಿಂದ 20ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೆಎಸ್ ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊನ್ನೆ ಕೆಎಸ್ ಆರ್‌ಟಿಸಿ ನಿಗಮದ ಬೋರ್ಡ್ ಮೀಟಿಂಗ್ ಮಾಡಿ, … Continued

ಯುಗಾದಿ ಹಬ್ಬ, ಸಾಲು ಸಾಲು ರಜೆ; ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳನ್ನು ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಂಸ್ಥೆಯ ನಾಲ್ಕು ನಿಗಮಗಳು ನಿರ್ಧರಿಸಿದೆ. ಏಪ್ರಿಲ್‌ 9 ರಂದು ಯುಗಾದಿ ಹಬ್ಬವಿದೆ. ಬಳಿಕ ಏಪ್ರಿಲ್‌ 11 ಕ್ಕೆ ರಂಜಾನ್‌ ಹಬ್ಬವಿದೆ. … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued

ಹುಣಸೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಮೈಸೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣಕ್ಕೆ ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ … Continued

ಶಿರಸಿ : ಬಂಡಲ ಬಳಿ ಬಸ್‌-ಕಾರು ಡಿಕ್ಕಿ, ಐವರು ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮಂಗಳೂರು ತಾಲೂಕಿನ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕಾರು ಚಾಲಕ ಚೆನ್ನೈ ಮೂಲದವರು ಎಂದು ಹೇಳಲಾಗಿದೆ. ಮೃತರನ್ನು … Continued

ಕೋಳಿ ಮಾಂಸದೊಂದಿಗೆ ಬಸ್ ಏರಿದ ಪ್ರಯಾಣಿಕ: ಪೊಲೀಸ್ ಠಾಣೆಗೆ ಬಂದ ಬಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಪ್ರಯಾಣಿಕನೊಬ್ಬ ಕೋಳಿ ಮಾಂಸದೊಂದಿಗೆ ಬಸ್ ಏರಿದ ಕಾರಣಕ್ಕೆ ಬಸ್‌ ಪೊಲೀಸ್‌ ಠಾಣೆಗೆ ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದ ವರದಿಯಾಗಿದೆ. ಸುರೇಶ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದನ್ನು ತಂದಿದ್ದು, … Continued

ʼಶಕ್ತಿʼ ಯೋಜನೆಯಲ್ಲಿ ಉಚಿತ ಪ್ರಯಾಣ : ಬಸ್ಸಿನಲ್ಲೇ ಬಟ್ಟೆ ಒಣಗಲು ಹಾಕಿದ ಪ್ರಯಾಣಿಕರು..!

ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ತಿಂಗಳು ಕಳೆದಿದೆ. ಇದೀಗ ವಾರಾಂತ್ಯದ ದಿನಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆಯುತ್ತಿದ್ದಾರೆ. ಈಗ ವಾಯವ್ಯ ಕರ್ನಾಟಕ ಸಾರಿಗೆ ಬಸ್‌ನಲ್ಲಿ ಮಹಿಳೆಯರು ಬಟ್ಟೆ ಒಣಗಲು ಹಾಕಿದ ವಿಡಿಯೋ ಭಾರೀ … Continued