ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ ಶಿವಸೇನೆ ಪುಂಡಾಟಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಇಂದು, ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಬೆಳಗಾವಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ನಡೆಸಲು … Continued

ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ಬೆಚ್ಚಿ ಬೀಳಿಸುವ ವೀಡಿಯೊ..| ಬೆಂಗಳೂರು : ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ … Continued

ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಬಸ್ಸಿನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು…!

ಬೆಳಗಾವಿ : ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಹೊಡೆದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಏರಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್‌ ಸೀಟ್ ಬಗ್ಗೆ ಪರಸ್ಪರರು ತಾವು ಹಿಡಿದಿದ್ದೇವೆ ಎಂದು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಆರಂಭದಲ್ಲಿ … Continued

ಕೆಎಸ್ ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ ; ಶೇ.15ರಿಂದ 20ರಷ್ಟು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಕೆಎಸ್ ಆರ್‌ಟಿಸಿ ಬಸ್ಸಿನ ಟಿಕೆಟ್ ದರದಲ್ಲಿ ಶೇ.15ರಿಂದ 20ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೆಎಸ್ ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊನ್ನೆ ಕೆಎಸ್ ಆರ್‌ಟಿಸಿ ನಿಗಮದ ಬೋರ್ಡ್ ಮೀಟಿಂಗ್ ಮಾಡಿ, … Continued

ಯುಗಾದಿ ಹಬ್ಬ, ಸಾಲು ಸಾಲು ರಜೆ; ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳನ್ನು ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಂಸ್ಥೆಯ ನಾಲ್ಕು ನಿಗಮಗಳು ನಿರ್ಧರಿಸಿದೆ. ಏಪ್ರಿಲ್‌ 9 ರಂದು ಯುಗಾದಿ ಹಬ್ಬವಿದೆ. ಬಳಿಕ ಏಪ್ರಿಲ್‌ 11 ಕ್ಕೆ ರಂಜಾನ್‌ ಹಬ್ಬವಿದೆ. … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued