ಕೆಎಸ್‌ಆರ್‌ಟಿಸಿಯಿಂದ ಪಾರ್ಸೆಲ್ ಸಾಗಾಟ ಸೇವೆ ; 20 ಟ್ರಕ್‌ಗಳ ಖರೀದಿ

ಬೆಂಗಳೂರು : ಮತ್ತೊಂದು ಕ್ರಮವನ್ನು ಕೈಗೊಳ್ಳಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಪ್ರಯಾಣಿಕರಿಗೆ ಪ್ರಯಾಣ ಸೇವೆ ಒದಗಿಸುತ್ತಿರುವ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾರ್ಸೆಲ್‌ಗಳನ್ನು ಸಾಗಾಟ ಮಾಡುವ ಸೇವೆಯನ್ನು ಆರಂಭಿಸಿದೆ. ಇದರಿಂದ ತನ್ನ ಆದಾಯವೂ ಹೆಚ್ಚಲಿದೆ ಎಂದು ಸಂಸ್ಥೆ ಭಾವಿಸಿದೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ 20 ಲಾರಿ ಟ್ರಕ್‌ಗಳನ್ನು ಖರೀದಿಸಿದೆ. ಸಾರ್ವಜನಿಕರು ಪಾರ್ಸೆಲ್‌ಗಳನ್ನು ತಾವು ತಲುಪಿಸಲು … Continued

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ವಿಶೇಷ ಬಸ್‌ ಓಡಾಟ; ಟಿಕೆಟ್‌ ಮುಂಗಡ ಬುಕ್ಕಿಂಗ್‌ಗೆ ರಿಯಾಯಿತಿ

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್ಸುಗಳನ್ನು ಓಡಿಸಲಿದೆ. ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. … Continued

ಸಾರಿಗೆ ಸಂಸ್ಥೆಗಳಿಗೆ 8719 ಸಿಬ್ಬಂದಿ ನೇಮಕಾತಿಗೆ ಸರ್ಕಾರದ ಅನುಮತಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಆಗಿರಲಿಲ್ಲ. 2016 ರಿಂದ ಈವರೆಗೆ ಸಿಬ್ಬಂದಿಯ ನಿವೃತ್ತಿ ಹಾಗೂ ಇತರೆ ಕಾರಣದಿಂದ 13,669 ಹುದ್ದೆಗಳು ಖಾಲಿ ಆಗಿವೆ. ಹೀಗಾಗಿ 13 ಸಾವಿರ … Continued

ಸಾರಿಗೆ ನಿಗಮಗಳಿಗೆ 5675 ಬಸ್‌ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued

ಶಕ್ತಿ ಯೋಜನೆ ಎಫೆಕ್ಟ್ : ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಹೆಚ್ಚಳ…

ಬೆಂಗಳೂರು: ಮಹಿಳಯರಿಗೆ ಉಚಿತ ಬಸ್‌ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಪರಿಣಾಮದ ಕಾರಣ ಪ್ರಯಾಣಿಕರಿಗೆ ಒಪ್ಪಂದದ ಮೇರೆಗೆ ಬಸ್‌ಗಳನ್ನು ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ನಿಗದಪಡಿಸಿದ್ದ ದರದಲ್ಲಿ ಹೆಚ್ಚಳ ಮಾಡಿದೆ. ಹೊಸ ದರಗಳು ಆಗಸ್ಟ್ 1ರಿಂದ ಜಾರಿಗೆ ಬರಲಿವೆ. ‘ಇತ್ತೀಚಿನ ದಿನಗಳಲ್ಲಿ ಶಕ್ತಿ ಯೋಜನೆಯ ಅನುಷ್ಠಾನದ ಬಳಿಕ ಸಾಮಾನ್ಯ, ವೇಗದೂತ ಹಾಗೂ ನಗರ … Continued

ಶಾಲಾ-ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆ ಎಸ್‌ ಆರ್ ಟಿ ಸಿ

ಬೆಂಗಳೂರು : ಕೆ ಎಸ್‌ ಆರ್ ಟಿ ಸಿಯು ರಾಜ್ಯದ ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿದೆ. ಈ ಬಗ್ಗೆ ಕೆಎಸ್ ಆರ್ ಟಿಸಿ ಪ್ರಕಟಣೆ ಹೊರಡಿಸಿದ್ದು, 2023-24ನೇ ಸಾಲಿನ ವಿದ್ಯಾರ್ಥಿಗಳ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ … Continued

ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ … Continued

ಕಳ್ಳತನವಾದ 4 ತಿಂಗಳ ನಂತರ ಅದೇ ಬಸ್ಸನ್ನೇರಿ ಕುಳಿತಿದ್ದ ಕಳ್ಳರ ಮುಖಚಹರೆ ಗುರುತಿಸಿ ಪೊಲೀಸರಿಗೆ ಒಪ್ಪಿಸಿದ ಬಸ್‌ ಕಂಡಕ್ಟರ್‌…!

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ.ಗಳ ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿತ್ತಿದ್ದ ವೇಳೆ ಬಸ್ ನಿರ್ವಾಹಕರು ಅವರ ಮುಖಚಹರೆ ಗುರುತಿಸಿ ಕಳ್ಳರನ್ನು ಪೊಲೀಸರ ಅತಿಥಿಯಾಗುವಂತೆ ಮಾಡಿದ ಘಟನೆ ನಡೆದಿದೆ. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ … Continued

ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ … Continued