ಕೆಎಸ್‌ಆರ್‌ಟಿಸಿಗೂ ಬರಲಿವೆ ಮೂರು ಎಲೆಕ್ಟ್ರಿಕ್ ಬಸ್‌:ವರದಿ

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮೊದಲ ಎಲೆಕ್ಟ್ರಿಕ್ ಬರಲಿದೆ ಎಂದು ವರದಿಯಾಗಿದೆ. ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಕೆಎಸ್‌ಆರ್‌ಟಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ … Continued

ಸಾರಿಗೆ ನೌಕರರೇ ಎಪ್ರಿಲ್‌ ೭ರಿಂದ ಕರೆ ನೀಡಿದ ಅನಿರ್ದಿಷ್ಟ ಮುಷ್ಕರ ಕೈಬಿಡಿ: ಸಾರಿಗೆ ಸಚಿವರ ಮನವಿ

ಬೆಂಗಳೂರು: ಎಪ್ರಿಲ್‌ ೭ರಿಂದ ಕರೆ ನೀಡಿರುವ ಅನಿರ್ದಿಷ್ಟ ಮುಷ್ಕರವನ್ನು ರದ್ದುಗೊಳಿಸುವಂತೆ ರಾಜ್ಯದ ರಸ್ತೆ ಸಾರಿಗೆ ನೌಕರರ ಒಕ್ಕೂಟಕ್ಕೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ನಾವು ಈಗಾಗಲೇ ಒಕ್ಕೂಟ ಮಂಡಿಸಿದ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಪೂರೈಸಿದ್ದೇವೆ. ಬಾಕಿ ಉಳಿದಿರುವ ಏಕೈಕ ಬೇಡಿಕೆಯೆಂದರೆ ಸಂಬಳವನ್ನು ಪರಿಷ್ಕರಿಸುವುದು. 6 ನೇ ವೇತನ ಆಯೋಗದ ಶಿಫಾರಸುಗಳಿಗೆ … Continued

ಈಡೇರದ ಬೇಡಿಕೆ: ಮಾ.೧೮ರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ತಮ್ಮ ಬೇಡಿಕೆ ಈಡೇರದ ಕಾರಣ ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟವು ಮಾರ್ಚ್ ೧೮ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಮಾ.೧೮ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು … Continued

ಸಾರಿಗೆ ನಿಗಮಕ್ಕೆ ೪ ಸಾವಿರ ಕೋಟಿ ರೂ.ನಷ್ಟ:ಸವದಿ

ಬೆಂಗಳೂರು: ಕೊವಿಡ್‌ ಪರಿಣಾಮದಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ೪ ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿಧಾನ ಪರಿಷತ್ತಿಗೆ ಶುಕ್ರವಾರ ತಿಳಿಸಿದರು. ಶು ೨,೯೮೦ ಕೋಟಿ ರೂ. ನಿವ್ವಳ ಆದಾಯವೇ ನಷ್ಟವಾಗಿದೆ. ಹೀಗಾಗಿ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುವಂತೆ ಆಗಿವೆ ಎಂದು ಹೇಳಿದರು. ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆಗೆ … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಕೆಸ್ಸಾರ್ಟಿಸಿ ಪಾರ್ಸಲ್‌-‌ ಕಾರ್ಗೊ ಸೇವೆಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್ಸನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯ ಕಂಡುಕೊಂಡಿರುವುದು … Continued

ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ: ಸಾರಿಗೆ ಸಚಿವ ಸವದಿ

ಡೀಸೆಲ್‌ ಬೆಲೆ ಹೆಚ್ಚಳಗೊಂಡಿದ್ದರೂ ಬಸ್‌ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಸ್‌ ಪ್ರಯಾಣ ದರ ಹೆಚ್ಚಿಸುವಂತೆ ಈಗಾಗಲೇ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾಪ ಬಂದಿದೆ. ಆದರೆ ಕೊರೊನಾ, ನೈಸರ್ಗಿಕ ವಿಕೋಪದ ಕಾರಣದಿಂದಾಗಿ ಈಗಾಗಲೇ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಿಸಿದರೆ ಜನರಿಗೆ ಇನ್ನಷ್ಟು … Continued