ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಹೆಚ್ಚಳ ; ಮತ್ತೆ ರಾಜ್ಯದ ಅತೀ ಶ್ರೀಮಂತ ದೇಗುಲದ ಪಟ್ಟ

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued

ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued

ಅತಿಹೆಚ್ಚು ಆದಾಯ ಪಡೆದ ಮುಜರಾಯಿ ದೇವಾಲಯಗಳ ಪಟ್ಟಿ ಬಿಡುಗಡೆ ; ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 1ನೇ ಸ್ಥಾನ : ರಾಜ್ಯದ 8 ಶ್ರೀಮಂತ ದೇವಾಲಯಗಳು..

ಬೆಂಗಳೂರು : 2023-24ರಲ್ಲಿ ಅತಿಹೆಚ್ಚು ಆದಾಯ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಆರ್ಥಿಕ ವರ್ಷದಲ್ಲಿ ₹146.01 ಕೋಟಿ ಆದಾಯ ಗಳಿಸಿದೆ ಎಂದು ಮುಜರಾಯಿ ಆಯುಕ್ತರು ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಸತತ 13ನೇ ವರ್ಷ ಆದಾಯದಲ್ಲಿ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆದಾಯ 123 ಕೋಟಿ ರೂ.ಗಳು

ಮಂಗಳೂರು : ರಾಜ್ಯದ ಮುಜುರಾಯಿ ವ್ಯಾಪ್ತಿಯ ದೇವಸ್ಥಾನಗಳ ಇತಿಹಾಸದಲ್ಲೇ ಅತೀ ಹೆಚ್ಚು ಅದಾಯ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಆದಾಯ 123 ಕೋಟಿ ರೂ. ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ 2022-23ನೇ ಆರ್ಥಿಕ ವರ್ಷದಲ್ಲಿ 123 ಕೋಟಿ ರೂ. … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರದ ದರ ಪರಿಷ್ಕರಣೆ

ಸುಬ್ರಹ್ಮಣ್ಯ: ರಾಜ್ಯದ ಹೆಸರಾಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರ ಸೇವಾ ದರ ಪರಿಷ್ಕರಿಸಲಾಗಿದೆ. ಈಗ 4,200 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಮೊದಲಿದ್ದ ದರಕ್ಕಿಂತ ಒಂದು ಸಾವಿರ ರೂಪಾಯಿ ಹೆಚ್ಚಳ ಆಗಿದೆ. ಮೊದಲು 3,200 ರೂ.ಗಳಿತ್ತು. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಡುವ ದೇವಳದಲ್ಲಿ ಸರ್ಪ ದೋಷ … Continued