ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಹೆಚ್ಚಳ ; ಮತ್ತೆ ರಾಜ್ಯದ ಅತೀ ಶ್ರೀಮಂತ ದೇಗುಲದ ಪಟ್ಟ

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued

ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

ಮಂಗಳೂರು : ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.‌ ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥ ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ … Continued