ಕುಮಟಾ: ದ್ವಿತೀಯ ಪಿಯು ಫಲಿತಾಂಶ; ಮೊದಲ ಬ್ಯಾಚಿನಲ್ಲೇ ಗೋರೆ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ೧೦೦ಕ್ಕೆ ನೂರು ಫಲಿತಾಂಶ

 ಕುಮಟಾ : ಈ ವರ್ಷದ ದ್ವಿತೀಯ ಪಿಯಿಸಿ ಪರೀಕ್ಷೆಯಲ್ಲಿ ಶ್ರೀ ಜಿ. ಎನ್. ಹೆಗಡೆ ಟ್ರಸ್ಟ್ (ರಿ) ಪ್ರಾಯೋಜಕತ್ವದಲ್ಲಿ ನಡೆಯುವ ಕುಮಟಾ ತಾಲೂಕು ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಕಾಲೇಜಿಗೆ ಇದು ಮೊದಲನೇ ಬ್ಯಾಚ್‌ ಆಗಿದ್ದು, ಆದರೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ – … Continued

ನಿವೇದಿತ ಆಳ್ವಾಗೆ ಕುಮಟಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ರಾಜೀನಾಮೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಮುಖಂಡ ಹಾಗೂ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಇಂದು, ಶನಿವಾರ ಕಾಂಗ್ರೆಸ್‌ ತನ್ನ ಮೂರನೇ ಅಭ್ಯರ್ಥಿಗಳ ಬಿಡುಗಡೆ ಮಾಡಿದ್ದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ-ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವದ ಅಂಗವಾಗಿ ಕುಮಟಾದ ಉಗಾದಿ ಉತ್ಸವ ಸಮಿತಿಯಿಂದ ಇಲ್ಲಿನ ನೆಲ್ಲೆಕೇರಿ ಮಹಾಸತಿ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಭಜನಾ ಸ್ಪರ್ಧೆಗಳು ನಡೆದವು. ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಂಡಿತ ಗೌರೀಶ ಯಾಜಿ ಕೂಜಳ್ಳಿ ಅವರ ಸಂಯೋಜಿತ ಕುಮಟಾದ ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ ಸ್ಥಾನ … Continued

ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಕುಮಟಾ : ಎರಡು ಎಕರೆ ವಿಸ್ತಾರದ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ: ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ | ವೀಕ್ಷಿಸಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಅಳ್ವೇಕೊಡಿಯ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ಜ್ವಾಲೆ ಆವರಿಸಿಕೊಂಡು ಆತಂಕ ಸೃಷ್ಟಿಸಿದೆ. ಅಳ್ವೆಕೋಡಿಯಲ್ಲಿರುವ ಬಾಷಾ ಶೇಖ್ ಎಂಬುವವರ ಮಾಲೀಕತ್ವದ ಗುಜರಿ ಅಂಗಡಿಯೊಳಕ್ಕೆ ಬೆಂಕಿ ತಗಲಿ ಗುಜರಿ ಸಾಮಗ್ರಿಗಳು ಸುಟ್ಟುಹೋಗಿವೆ.. ಎರಡು ಎಕರೆಯಷ್ಟು ಪ್ರದೇಶದಲ್ಲಿ ಗುಜರಿ ಸಾಮಗ್ರಿಗಳು ಸಂಗ್ರಹಿಸಿಡಲಾಗಿದ್ದರಿಂದ ಈ … Continued

ಕುಮಟಾ : ಮುಳುಗುತ್ತಿದ್ದ ಬೋಟ್‌ನಿಂದ 17 ಮೀನುಗಾರರ ರಕ್ಷಣೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬಳಿ ಸಮುದ್ರದಲ್ಲಿ ಮುಳಗುತ್ತಿದ್ದ ಪರ್ಸಿನ್‌ ಬೋಟ್‌ನಿಂದ 17 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಕುಮಟಾ ತಾಲುಕಿನ ಕಡ್ಲೆ ಬಳಿ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಬೋಟ್ ಬಂಡೆಗೆ ಬಡಿದು ಮುಳುಗಡೆಯಾಗಿದೆ. ಕರಾವಳಿ ಕಾವಲು ಪಡೆಯವರು ಹಾಗೂ ಅಕ್ಕಪಕ್ಕದ ಬೋಟ್‌ನಲ್ಲಿದ್ದವರು ಸೇರಿ ಎಲ್ಲ … Continued

ಕುಮಟಾ: ಬೆಟ್ಕುಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು | ವೀಕ್ಷಿಸಿ

ಕುಮಟಾ : ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬೆಟ್ಕುಳಿ ಬಳಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಚಿರತೆಯ ಮೃತ ದೇಹ ಕಂಡು ಬಂದಿದ್ದು ಅದನ್ನು ನೋಡಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ … Continued

ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ … Continued

ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು. ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ … Continued

ಕೂಜಳ್ಳಿ: ಮೂವರು ಸಂಗೀತ-ಯಕ್ಷ ಸಾಧಕರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ, ಷಡಕ್ಷರಿ ಗವಾಯಿಗಳ ಪುತ್ಥಳಿ ನಿರ್ಮಿಸಿ ಎಂದ ಪ್ರಶಸ್ತಿ ಪುರಸ್ಕೃತ ಪಂ.ಮರಡೂರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪ್ರತಿವರ್ಷ ಕೊಡಮಾಡುವ ಮೂರು ವರ್ಷಗಳ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮೂವರು ಸಾಧಕರಿಗೆ ಪ್ರದಾನ ಮಾಡಲಾಯಿತು. ೨೦೨೦-೨೧, ೨೦೨೧-೨೨ ಹಾಗೂ ೨೦೨೨-೨೩ನೇ ಸಾಲಿನ ಪ್ರಶಸ್ತಿಯನ್ನು ಕ್ರಮವಾಗಿ ಖ್ಯಾತ ತಬಲಾ ವಾದಕ ಹೊನ್ನಾವರ ತಾಲೂಕಿನ ದಿವಂಗತ ಎನ್‌.ಎಸ್‌.ಹೆಗಡೆ … Continued