ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕೆ ಬಂದ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಹಾಲಿ ಸೊರಬದಲ್ಲಿ ವಾಸಿಸುತ್ತಿದ್ದ ಪೂರ್ಣಿಮಾ ಆಚಾರ್ಯ(38) ಸಾವಿಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಕೋಗಾರ … Continued

ಮರವಂತೆ : ಸಮುದ್ರಕ್ಕೆ ಉರುಳಿದ ಕಾರು- ಓರ್ವನ ಸಾವು, ಇನ್ನೋರ್ವ ನಾಪತ್ತೆ

posted in: ರಾಜ್ಯ | 0

ಉಡುಪಿ:ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವನಿಗೆ ಹುಡುಕಾಟ ನಡೆಯುತ್ತಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ ಮೇಲಿನಿಂದ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಮೃತಪಟ್ಟಿದ್ದು, ಮತ್ತೊಬ್ಬರು ಸಮುದ್ರ ನೀರಲ್ಲಿ ನಾಪತ್ತೆಯಾಗಿದ್ದಾರೆ. … Continued

ಕುಂದಾಪುರ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಎ.ಜಿ ಕೊಡ್ಗಿ ನಿಧನ

posted in: ರಾಜ್ಯ | 0

ಕುಂದಾಪುರ: ಕರಾವಳಿ ರಾಜಕೀಯ ರಂಗದ ಭೀಷ್ಮ ಎಂದೇ ಹೆಸರು ಪಡೆದಿದ್ದ ಹಿರಿಯ ರಾಜಕಾರಣಿ ಎ.ಜಿ.ಕೊಡ್ಗಿ (ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ) ಅವರು ಅನಾರೋಗ್ಯದಿಂದ ಇಂದು, ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರಿಗೆ ಡೆಂಗೆ ಜ್ವರವಾಗಿತ್ತು ಎಂದು ಹೇಳಲಾಗಿದೆ. ಮೃತರು ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಮಾರು 56 ವರ್ಷಗಳ … Continued

ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಸ್ನೇಹಿತನ ಬಂಧನ

posted in: ರಾಜ್ಯ | 0

ಉಡುಪಿ: ಕುಂದಾಪುರದ ಖಾಸಗಿ ಆಸ್ಪತ್ರೆ ಮಾಲಕ ಹಾಗೂ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಲೆಕ್ಕಪರಿಶೋಧಕ ಮೊಳಹಳ್ಳಿ ಗಣೇಶ ಶೆಟ್ಟಿ ಅವರನ್ನು ಬಂಧಿಸಲಾಗಿದೆ.ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗೆಳೆಯನಿಂದ ಮೋಸಕ್ಕೊಳಗಾದ ಉದ್ಯಮಿ ಕಟ್ಟೆ ಭೋಜಣ್ಣ, ಗೆಳೆಯನ ಮನೆಯ ಮುಂದೆ ಹೋಗಿ ಗುಂಡಿಕ್ಕಿಕೊಂಡು … Continued

ಪಿಆರ್ ಒ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

posted in: ರಾಜ್ಯ | 0

ಕುಂದಾಪುರ: ವಿದ್ಯಾರ್ಥಿನಿಯರಿಗೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಅವರನ್ನು ತಕ್ಷಣವೇ ವಜಾಗೊಳಿಸಲು ಆಗ್ರಹಿಸಿ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಗುರುವಾರ (ಫೆ.24) ಪ್ರತಿಭಟನೆ ನಡೆಸಿದರು. ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಶಿಸ್ತು ಕ್ರಮ … Continued

ಕುಂದಾಪುರ: ಈಗ ಮತ್ತೊಂದು ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

posted in: ರಾಜ್ಯ | 0

ಉಡುಪಿ: : ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತೆಲೆ ಇದ್ದು, ದಿನದಿಂದ ದಿನಕ್ಕೆ ಉಡುಪಿ ಜಿಲ್ಲೆಯ ಹೊಸ ಹೊಸ ಕಾಲೇಜುಗಳಲ್ಲಿ ಈ ವಿವಾದ ಹಬ್ಬುತ್ತಿದೆ. ಜಿಲ್ಲೆಯ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು.ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕ್ಯಾಂಪಸ್‌ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕೇಸರಿ … Continued

ಕುಂದಾಪುರದಲ್ಲಿ ತೀವ್ರಗೊಂಡ ಹಿಜಾಬ್‌ ವಿವಾದ: ಬೇರೆ ಕಾಲೇಜುಗಳಿಗೂ ವಿಸ್ತರಣೆ.. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳ ಮೆರವಣಿಗೆ

posted in: ರಾಜ್ಯ | 0

ಉಡುಪಿ:ಕುಂದಾಪುರದಲ್ಲಿ ಹಿಜಾಬ್ ವಿವಾದ ಸಂಘರ್ಷ 4ನೇ ದಿನಕ್ಕೆ ಕಾಲಿಟ್ಟಿದ್ದು ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕುಂದಾಪುರದಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಧರಿಸುವುದನ್ನು ವಿರೋಧಿಸಿ ಆರ್. ಎನ್. ಶೆಟ್ಟಿ ಮತ್ತು ಬಂಡಾರ್ಕಾರ್ಸ್ ಕಾಲೇಜಿವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಂದಾಪುರದ ಆರ್‌.ಎನ್‌.ಶೆಟ್ಟಿ ಕಾಲೇಜಿಗೆ ಶನಿವಾರ ದಿಢೀರ್‌ ರಜೆ ಘೋಷಿಸಲಾಗಿದೆ ಎಂದು … Continued

ಮುಂದುವರಿದ ಹಿಜಾಬ್‌ ವಿವಾದ: ಕುಂದಾಪುರ ಕಾಲೇಜಿಗೆ ನಾಳೆ ರಜೆ

posted in: ರಾಜ್ಯ | 0

ಉಡುಪಿ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.  ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದ ವರೆಗೆ ಮಾತ್ರ ಬಿಟ್ಟುಕೊಂಡಿದೆ. ಆದರೆ ತಮ್ಮನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು, ಶುಕ್ರವಾರ ತರಗತಿಗೆ … Continued

ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

posted in: ರಾಜ್ಯ | 0

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued