ವೀಡಿಯೊ..| ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಶಿವಮೊಗ್ಗ : ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾದ ಘಟನೆ ಇಂದು ಹುಲಿಕಲ್ ಘಾಟಿಯ ಫಾಲ್ಸ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಹೋಗುತ್ತಿದ್ದಾಗ ತೀವ್ರ ತಿರುವುಗಳಿರುವ … Continued

ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, … Continued

ಹೆಜಮಾಡಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂವರು ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲು … Continued

ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಕಾಂತಾರ-1 ಸಿನೆಮಾ ಕಲಾವಿದರನ್ನು ಒಯ್ಯುತ್ತಿದ್ದ ಮಿನಿ ಬಸ್ ಪಲ್ಟಿ : ಹಲವರಿಗೆ ಗಾಯ

ಕುಂದಾಪುರ : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-1 ಚಲನಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ನೃತ್ಯ ಕಲಾವಿದರಿದ್ದ ಮಿನಿ ಬಸ್ ಭಾನುವಾರ ರಾತ್ರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 25 ಜೂನಿಯರ್ ನೃತ್ಯಗಾರರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಿ ಮಿನಿ ಬಸ್ ನಲ್ಲಿ ತೆರಳುತ್ತಿದ್ದರು. ಸ್ಕೂಟಿ ಅಡ್ಡ ಬಂದ ಪರಿಣಾಮ ಅಪಘಾತವತಪ್ಪಿಸಲು ಚಾಲಕ ಯತ್ನಿಸಿದಾಗ … Continued

ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ: ಹಿರಿಯ ಉದ್ಯಮಿ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ಹೊಂದಿದ್ದು. … Continued