ಪಟಿಯಾಲ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ ಬೆಂಗಳೂರಿಗೆ ಏರ್‌ಲಿಫ್ಟ್‌

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … Continued