ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ … Continued

ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು

ದಾವಣಗೆರೆ:  ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ … Continued

ಶಿಗ್ಗಾವಿ | ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು … Continued

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಂಗ ತನಿಖೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದೆ ಕೆರೆ, ರಾಜಕಾಲುವೆ ಹಾಗೂ ಬಫರ್ ಝೋನ್ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರೊಂದಿಗೆ ತನಿಖಾ ಆಯೋಗ ರಚನೆ ಮಾಡಲಾಗುವುದು ಎಂದು ತಿಳಿಸಿದರು. ಕೆರೆ, ರಾಜಕಾಲುವೆ ಒತ್ತುವರಿ ತೆರವು … Continued