ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ. ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಬೆಳಗಾವಿಯ ಬಾಗೇವಾಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅವಾಚ್ಯ ಶಬ್ದ ಬಳಕೆ ಆರೋಪದ ಪ್ರಕರಣ :ಸಿ.ಟಿ.ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಯಾವುದೇ ಆತುರದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ಮಾಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ … Continued

ಸಿ.ಟಿ. ರವಿ ಪ್ರಕರಣ | ಕರ್ತವ್ಯ ಲೋಪದ ಆರೋಪ ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್‌

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕರಣದಲ್ಲಿ (CT Ravi Case) ಮೊದಲ ತಲೆದಂಡವಾಗಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಸಿ.ಟಿ ರವಿ ಅವರನ್ನು ಬಂಧಿಸಿದ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ : ತಕ್ಷಣವೇ ಶಾಸಕ ಸಿ ಟಿ ರವಿ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ … Continued

ಸಚಿವೆಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ಅಶ್ಲೀಲ ಪದಬಳಕೆ ಆರೋಪಿತ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರರಣೆ ನಡೆಸಿದ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶರು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ಅವರು … Continued