ʼಗೃಹಲಕ್ಷ್ಮಿʼ ಯೋಜನೆ 1 ವರ್ಷ ನಿಲ್ಲಿಸಿ, ನೀರಾವರಿ ಯೋಜನೆಗೆ ಹಣ ಕೊಡಿ: ಕಾಂಗ್ರೆಸ್‌ ಸರ್ಕಾರಕ್ಕೆ ಸ್ವಪಕ್ಷದ ಶಾಸಕನಿಂದಲೇ ಆಗ್ರಹ !

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಒಂದು ವರ್ಷದ ಮಟ್ಟಿಗೆ ಸ್ಥಗಿತಗೊಳಿಸಿ, ಅದಕ್ಕೆ ಮೀಸಲಾಗಿರುವ ಹಣವನ್ನು ಪ್ರಮುಖ ನೀರಾವರಿ ಯೋಜನೆಗಳಿಗೆ ಬಳಸಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಟಿಪ್ಪಣ್ಣ ಕಮಕನೂರು ಸಲಹೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ, ಕಳಸಾ-ಬಂಡೂರಿ, … Continued

ಕರ್ನಾಟಕದ 4 ಸ್ಥಾನಗಳು ಸೇರಿ ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ : ಚುನಾವಣಾ ಆಯೋಗ (ಇಸಿಐ)ವು ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯ ದಿನಾಂಕವನ್ನು ಮಂಗಳವಾರ ಪ್ರಕಟಿಸಿದೆ. ಸದಸ್ಯರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ 4 ಸ್ಥಾನಗಳು, ಉತ್ತರ ಪ್ರದೇಶದಲ್ಲಿ 11, ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ … Continued

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ಸಿನ ಐವರು, ಬಿಜೆಪಿಯ ಇಬ್ಬರಿಗೆ ಗೆಲುವು ; ಜೆಡಿಎಸ್‌ಗೆ ಸೋಲು

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನಗಳಲ್ಲಿ ಜಯಗಳಿಸಿದೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ ಭಾರಿ ಆಘಾತ ಎದುರಾಗಿದ್ದು, ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬುಧವಾರ (ಜೂನ್ 3) ತನ್ನ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಕೆ. ಹರಿಪ್ರಸಾದ, ತಿಪ್ಪಣ್ಣಪ್ಪ ಕಮಕನೂರ, ಪಿ. ವಿ. ಮೋಹನ ಮತ್ತು ಶಿವಣ್ಣ ಮಳವಳ್ಳಿ ಅವರು ಅಭ್ಯರ್ಥಿಗಳಾಗಲು ಅನುಮೋದನೆ ನೀಡಿದ್ದಾರೆ ಎಂದು … Continued

ಕರ್ನಾಟಕದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೂನ್ 30ಕ್ಕೆ ಅವಧಿ ಮುಕ್ತಾಯವಾಗುವ ಏಳು ಸದಸ್ಯರ ಸ್ಥಾನಗಳಿಗೆ ಜೂನ್ 18ಕ್ಕೆ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸದಸ್ಯರಾದ ಗೋವಿಂದ ರಾಜು, ನಸೀರ್ ಅಹ್ಮದ್, ತಿಪ್ಪಣ್ಣಪ್ಪ ಮತ್ತು ಬಿ ಕೆ ಹರಿಪ್ರಸಾದ್, ಬಿಜೆಪಿ ಸದಸ್ಯರಾದ ಎನ್ ನಾಗರಾಜು(ಎಂಟಿಬಿ), ಪ್ರತಾಪ್ ಸಿಂಹ ನಾಯಕ್ ಕೆ ಮತ್ತು ಸುನಿಲ್ … Continued

ಬಿಹಾರದಲ್ಲಿ ಹೊಸ ನಾಯಕತ್ವಕ್ಕೆ ದಾರಿ: ಪರಿಷತ್ ಸದಸ್ಯತ್ವಕ್ಕೆ ನಿತೀಶಕುಮಾರ ರಾಜೀನಾಮೆ

ಪಾಟ್ನಾ: ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶಕುಮಾರ ಸೋಮವಾರ (ಮಾರ್ಚ್ 30) ತಮ್ಮ ಬಿಹಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 16 ರಂದು ನಿತೀಶಕುಮಾರ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. … Continued

ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ತಂದೆ-ತಾಯಿ, ಹಿರಿಯರ ಆರೈಕೆ ಮಾಡದೇ ಇದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅಂತಹ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು (Will, Gift Deed) ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. … Continued