ಶಿರಸಿ | ಮನೆಯ ಅಂಗಳಕ್ಕೇ ಬಂದ ಚಿರತೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ನೀರ್ನಳ್ಳಿಯ ಮನೆಯೊಂದರ ಅಂಗಳಕ್ಕೇ ರಾತ್ರಿ ಸಮಯದಲ್ಲಿ ಚಿರತೆ ಬಂದಿದೆ ಎಂದು ವರದಿಯಾಗಿದೆ. ಚಿರತೆಯ ಮನೆ ಅಂಗಳಿಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ ಸುಮಾರು 12:30ರ ಸುಮಾರಿಗೆ ನೀರ್ನಳ್ಳಿಯ ರಾಮಚಂದ್ರ ಹೆಗಡೆ ಎಂಬವರ ಮನೆಯ ಅಂಗಳಕ್ಕೆ ಚಿರತೆ ಬಂದಿದೆ ಎಂದು ವರದಿಯಾಗಿದೆ.  ಆಕಡೆ ಈಕಡೆ ನೋಡುತ್ತ … Continued

ಏಕತಾ ಪ್ರತಿಮೆ ಬಳಿ ಒಂದು ಕೃಷ್ಣಮೃಗ ಬೇಟೆಯಾಡಿದ ಚಿರತೆ ; ಅದನ್ನು ನೋಡಿ ಆಘಾತದಿಂದ ಇನ್ನೂ 7 ಕೃಷ್ಣಮೃಗಗಳು ಸಾವು…!

ಗಾಂಧಿನಗರ: ಗುಜರಾತಿನ ಸ್ಟ್ಯಾಚ್ಯೂ ಆಫ್ ಯೂನಿಟಿ ಬಳಿಯ ಜಂಗಲ್ ಸಫಾರಿ ಪಾರ್ಕ್‌ಗೆ ಚಿರತೆಯೊಂದು ನುಗ್ಗಿ ಕೃಷ್ಣಮೃಗ ಬೇಟೆಯಾಡಿದ ನಂತರ ಇನ್ನೂ ಏಳು ಕೃಷ್ಣಮೃಗಗಳು ಆಘಾತದಿಂದ ಮೃತಪಟ್ಟಿವೆ ಎಂದು ವರದಿಯಾಗಿದೆ. ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರ ಮುಂಜಾನೆ ಈ ಘಟನೆ ಸಂಭವಿಸಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, 2 ರಿಂದ 3 ವರ್ಷ ವಯಸ್ಸಿನ … Continued

ವೀಡಿಯೊಗಳು..| ಶಿರಸಿ ; ಸುಗಾವಿ ಬಳಿ ಚಿರತೆಗಳ ಓಡಾಟ ; ದೃಶ್ಯ ಕ್ಯಾಮರಾದಲ್ಲಿ ಸೆರೆ…

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿಯ ಸುತ್ತಮುತ್ತ ಚಿರತೆಗಳು ಓಡಾಡುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮೊದಲೆಲ್ಲ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪದೇಪದೇ ಕಾಣಿಸಿಕೊಳ್ಳುತ್ತಿವೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಸುಗಾವಿ ಸಮೀಪದ ಓಣೀಕೇರಿ ಹೈಸ್ಕೂಲ್‌ ಬಳಿ ಹಾಗೂ ಸಮೀಪದ ಬಿದ್ರಳ್ಳಿ ಸೇತುವೆ ಹಾಗೂ ದೇವಸ್ಥಾನದ ಬಳಿ ಒಂದೇ ದಿನ … Continued

ವೀಡಿಯೊ..| ಸಿದ್ದಾಪುರ : ಮುಸೆಗಾರ ಗ್ರಾಮದಲ್ಲಿ ಮನೆ ಅಂಗಳಕ್ಕೆ ಬಂದ ಕರಿ ಚಿರತೆ…! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಸಿದ್ದಾಪುರ: ಉತ್ತರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆಯೊಂದರ ಅಂಗಳದಲ್ಲಿ ಕರಿ ಚಿರತೆ ಕಾಣಿಸಿಕೊಂಡಿದೆ. ಸಿದ್ದಾಪುರ ತಾಲೂಕಿನ ಮುಸೆಗಾರಎಂಬ ಗ್ರಾಮದ ಮನೆಯೊಂದರ ಅಂಗಳಲದಲ್ಲಿ ಈ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಈ ಹಿಂದೆಯೂ ಎರಡು ಕಾಣಿಸಿಕೊಂಡಿತ್ತು ಹಾಗೂ ಪ್ರತಿ ಬಾರಿ ಕಾಣಿಸಿಕೊಂಡಾಗಲೂ ನಾಯಿಯನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ನಾಯಿ ರುಚಿ ಕಂಡಿರುವ ಚಿರತೆ ಸುಲಭ … Continued

ವೀಡಿಯೊ..| ಚಿರತೆಯನ್ನೇ ಬೇಟೆಯಾಡಿದ ನಾಯಿಗಳು…!

ಚಿರತೆ ನಾಯಿಯನ್ನು ಬೇಟೆ ಮಾಡುವುದನ್ನು ನೋಡಿರಬೇಕು. ಆದರೆ ನಾಯಿಗಳು ಚಿರತೆಯನ್ನು ಬೇಟೆಯಾಡುವುದನ್ನು ನೋಡುವುದು ಬಹಳ ಅಪರೂಪ. ಇದನ್ನು ನೋಡಿಲ್ಲದಿದ್ದರೆ ನಾಯಿಗಳ ಗುಂಪು ಚಿರತೆಯೊಂದನ್ನು ಬೇಟೆಯಾಡಿದ ವೀಡಿಯೊವೊಂದು ವೈರಲ್‌ ಆಗಿದೆ. ಈ ವೈರಲ್ ವೀಡಿಯೊ ಕ್ಲಿಪ್‌ನಲ್ಲಿ ನಾಯಿಗಳ ಗುಂಪು ಚಿರತೆ ಮೇಲೆ ಎರಗಿ ಕಚ್ಚಿ ಎಳೆಯುತ್ತಿರುದನ್ನು ತೋರಿಸುತ್ತದೆ. ಚಿರತೆ ತನ್ನನ್ನು ತಾನು ಉಳಿಸಿಕೊಳ್ಳಲು ತನ್ನ ಶಕ್ತಿಮೀರಿ ಪ್ರಯತ್ನಿಸುತ್ತದೆ … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ವೀಡಿಯೊ…| ಕುಮಟಾ: ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ, ಹಳಕಾರ, ಚಿತ್ರಗಿ ಮೊದಲಾದ ಪ್ರದೇಶಗಳಲ್ಲಿ ರಾತ್ರಿ ಅವಧಿಯಲ್ಲಿ ಆಗಾಗ ಜನರಿಗೆ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಕುಮಟಾ ತಾಲೂಕಿನ ಚಿತ್ರಗಿಯ ಶೇಷಾದ್ರಿ ಗುಡ್ಡದಲ್ಲಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಈ ಚಿರತೆ ಸೆರೆಯಾಗಿದೆ. ಈ ಭಾಗದ ಜನರು … Continued

ವೀಡಿಯೊ..| ಕುಮಟಾ : ಮನೆ ಬಾಗಿಲಿಗೇ ಬಂದು ನಾಯಿ ಹೊತ್ತೊಯ್ದ ಚಿರತೆ…!

ಕುಮಟಾ : ಮನೆಯಂಗಳಕ್ಕೇ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ನಡೆದಿದೆ. ಕುಮಟಾ ತಾಲೂಕಿನ ಹೊಲನಗದ್ದೆಯ ಬೆಳ್ಳಕ್ಕಿ ಎಂಬಲ್ಲಿ ದತ್ತಾತ್ರೇಯ ಭಟ್ಟ ಎಂಬವರ ಮನೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆಯವರು ಹಾಗೂ ಅಕ್ಕಪಕ್ಕದ ಮನೆಯವರು ಭಯಬೀತರಾಗಿದ್ದಾರೆ. ರಾತ್ರಿ ಮನೆಯ ಅಂಗಳಕ್ಕೇ ಬಂದ ಚಿರತೆ ನಾಯಿ … Continued

ಶಿರಸಿ: ಕಾಡುಬೆಕ್ಕು ಹಿಡಿಯಲು ವಿದ್ಯುತ್ ಕಂಬ ಏರಿದ ಚಿರತೆ, ವಿದ್ಯುತ್ ತಗುಲಿ ಎರಡೂ ಸಾವು

ಶಿರಸಿ: ಕಾಡು ಬೆಕ್ಕು ಹಿಡಿಯಲು ವಿದ್ಯುತ್‌ ಕಂಬ ಏರಿದ ಚಿರತೆಯೊಂದು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬೆಳಗಲ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಚಿರತೆ ಬೇಟೆಗೆಂದು ಅಟ್ಟಿಸಿಕೊಂಡು ಬಂದಾಗ ಜೀವ ಉಳಿಸಿಕೊಳ್ಳಲು ಕಾಡು ಬೆಕ್ಕು ವಿದ್ಯುತ್‌ ಕಂಬ ಏರಿ ಕುಳಿತಿತ್ತು. ತನ್ನ ಬೇಟೆ ಹಿಡಿಯುವ … Continued