ಜಸ್ಟ್‌ ಪಾಸಾದ್ರೆ ಸಾಕು… ಪರೀಕ್ಷೆಯಲ್ಲಿ ನನಗೆ ಇಷ್ಟು ಮಾರ್ಕ್ಸ್‌ ಬರಲೇ ಬೇಕು ; ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ : ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ (exam) ಪಾಸ್‌ ಮಾಡಿಸುವಂತೆ ಪ್ರಾರ್ಥಿಸಿ ದೈವಕ್ಕೆ ಚೀಟಿ ಬರೆದಿದ್ದಾನೆ. ಪರೀಕ್ಷೆಯಲ್ಲಿ ನನಗೆ ಇಂತಿಷ್ಟು ಅಂಕ ಬರಬೇಕೆಂದು ಚೀಟಿ ಬರೆದು ಅದನ್ನು ಹುಂಡಿಗೆ ಹಾಕಿ ದೈವ ದೇವರಲ್ಲಿ ಜಸ್ಟ್‌ ಪಾಸ್‌ ಮಾಡಿಸಿದರೆ ಸಾಕು ಎಂದು ಪ್ರಾರ್ಥಿಸಿದ್ದಾನೆ. ಇದೀಗ ಈ ಚೀಟಿ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಜಿಲ್ಲೆಯ ಕುಂದಾಪುರ ಹೊಳ … Continued

‘ಭಾರತದ ಮಗಳು…ಸಾವಿರಾರು ಮೈಲು ದೂರದಲ್ಲಿದ್ದರೂ ನಮ್ಮ ಹೃದಯಕ್ಕೆ ಹತ್ತಿರವಾಗಿದ್ದೀರಿ’ : ಸುನೀತಾ ವಿಲಿಯಮ್ಸ್‌ಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ: ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದಲ್ಲಿದ್ದು, ಈಗ ಅಲ್ಲಿಂದ ಭೂಮಿಗೆ ವಾಪಸಾಗಲು ಮಂಗಳವಾರ ಪ್ರಯಾಣ ಆರಂಭಿಸಿದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃದಯಪೂರ್ವಕ ಪತ್ರ ಬರೆದಿದ್ದಾರೆ. ಮಾರ್ಚ್ 18 ರಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡ ಪತ್ರದಲ್ಲಿ, … Continued

ಉತ್ತರ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು-ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ; ಸೂಕ್ತ ಕ್ರಮಕ್ಕೆ ಸರ್ಕಾರದ ಸೂಚನೆ-ಅನಂತಮೂರ್ತಿ ಹೆಗಡೆ

 ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಕೈಗೊಂಡ ಏಳು ದಿನಗಳ ಪಾಯಾತ್ರೆಯ ಪರಿಣಾಮ, ಒಂದು ವರ್ಷದ ನಂತರ ಎಚ್ಚೆತ್ತ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ ಎಂದು ಅನಂತಮೂರ್ತಿ ಹೆಗಡೆ … Continued

ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ವಕ್ಫ್ ಆಸ್ತಿ ರಾಷ್ಟ್ರೀಕರಣ ಮಾಡಿ ; ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ … Continued

ದೇವೇಗೌಡರನ್ನೇ ಸೋಲಿಸಿದ ನನಗೇ ಟಿಕೆಟ್ ಕೊಡಿ : ಸಿದ್ದರಾಮಯ್ಯಗೆ ತೇಜಸ್ವಿನಿ ಗೌಡ ಪತ್ರ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ತೀವ್ರತೆ ಪಡೆದುಕೊಂಡಿದೆ. ಇದರ ಮಧ್ಯೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ತಾನೂ ಟಕೆಟ್‌ ಆಕಾಂಕ್ಷಿಯಾಗಿದ್ದು, ತಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಪತ್ರ ಬರೆದಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ … Continued

ಅರ್ಜಿ ಸಲ್ಲಿಸಿದ 48 ವರ್ಷಗಳ ನಂತರ ಉದ್ಯೋಗ ಪತ್ರ ಸ್ವೀಕರಿಸಿದ 70 ವರ್ಷದ ಮಹಿಳೆ…!

ಕೆಲಸಕ್ಕೆ ಅರ್ಜಿ ಸಲ್ಲಿಸಿದ ನಂತರ ಉತ್ತರಕ್ಕಾಗಿ ಕಾಯುವುದು ನಿಜವಾಗಿಯೂ ಹಿಂಸೆಯ ಕೆಲಸವಾಗಿದೆ. ಆದರೆ ಯುನೈಟೆಡ್‌ ಕಿಂಗ್ಡಂನಲ್ಲಿ 70 ವರ್ಷ ವಯಸ್ಸಿನ ಮಹಿಳೆಗೆ ಅವರ ಉದ್ಯೋಗ ಅರ್ಜಿಗೆ ಉತ್ತರ ಮಾತ್ರ ಅವರು ಅರ್ಜಿ ಸಲ್ಲಿಸಿದ ಸುಮಾರು 50 ವರ್ಷಗಳ ನಂತರ ಬಂದಿದೆ…! ಲಿಂಕನ್‌ಶೈರ್‌ನ ನಿವಾಸಿ ಟಿಝಿ ಹಡ್ಸನ್ ಎಂಬ ಮಹಿಳೆ ಮೋಟಾರ್‌ಸೈಕಲ್ ಸ್ಟಂಟ್ ರೈಡರ್ ಆಗಬೇಕೆಂದು ಕನಸು … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued