ಕರ್ನಾಟಕದ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸದಾಗಿ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ; ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ … Continued

545 ಪಿಎಸ್‌ಐ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಇಲಾಖೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ನಾಲ್ಕು ವರ್ಷಗಳ ಹಿಂದೆ 545 ಪಿಎಸ್‌ಐ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿ, ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಈ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಸಿಎಂ ಸಿದ್ದರಾಮಯ್ಯ ಪುತ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಬೆಂಗಳೂರು :  ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಮಾಧ್ಯಮ ಮಾಹಿತಿ ನೀಡಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತು ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದೆ. … Continued

ಲೋಕಸಭೆ ಚುನಾವಣೆ : ಬಿಜೆಪಿಯಿಂದ 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ನಟ ಸನ್ನಿ ದಿಯೋಲಗೆ ಟಿಕೆಟ್‌ ನಿರಾಕರಣೆ

ನವದೆಹಲಿ: ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ 11 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಇತ್ತೀಚಿನ ಪಟ್ಟಿಯಲ್ಲಿ, ಬಿಜೆಪಿ ಪಕ್ಷವು ಒಡಿಶಾದಿಂದ ಮೂವರು, ಪಂಜಾಬ್‌ನಿಂದ ಆರು ಮತ್ತು ಪಶ್ಚಿಮ ಬಂಗಾಳದಿಂದ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ. ಪಟ್ಟಿಯಲ್ಲಿ, ನಟ ಮತ್ತು ಹಾಲಿ ಗುರುದಾಸಪುರ ಸಂಸದ ಸನ್ನಿ ಡಿಯೋಲ್ ಬದಲಿಗೆ ದಿನೇಶ್ … Continued

ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಪಿಲಿಭಿತ್‌ನಿಂದ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿದ ಕೆಲವೇ ದಿನಗಳಲ್ಲಿ ಪಿಲಿಭಿತ್‌ ಹಾಲಿ ಸಂಸದ ವರುಣ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವನಾತ್ಮಕ ಬರೆದಿದ್ದಾರೆ. “ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ … ನನ್ನ ಸಂಬಂಧ (ನಿಮ್ಮೊಂದಿಗೆ) ನನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ. ನಾನು ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರುತ್ತೇನೆ … Continued

ಲೋಕಸಭೆ ಚುನಾವಣೆ: ಬಿಜೆಪಿಯ ನಾಲ್ಕನೇ ಪಟ್ಟಿ ಬಿಡುಗಡೆ : ನಟಿ ರಾಧಿಕಾ ಶರತಕುಮಾರಗೆ ಟಿಕೆಟ್‌

ನವದೆಹಲಿ: ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿರುವ ತಮಿಳುನಾಡು ಮತ್ತು ಪುದುಚೇರಿಯ ಸಂಸದೀಯ ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳಗೊಂಡಿದೆ. ಖ್ಯಾತ ನಟಿ ಹಾಗೂ ರಾಜಕಾರಣಿ ರಾಧಿಕಾ ಶರತಕುಮಾರ ಅವರಿಗೆ ತಮಿಳುನಾಡಿನ ವಿರುಧನಗರ ಕ್ಷೇತ್ರದಿಂದ … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued

ಲೋಕಸಭೆ ಚುನಾವಣೆ: ಬಿಡುಗಡೆಯಾದ ಬಿಜೆಪಿ 267 ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ 24%ರಷ್ಟು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌…!

ನವದೆಹಲಿ: ಬಿಜೆಪಿ ಇದುವರೆಗೆ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವು 267 ಅಭ್ಯರ್ಥಿಗಳನ್ನು ಹೆಸರಿಸಿದೆ. ಅದರಲ್ಲಿ ಸುಮಾರು 24%ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂದು ವರದಿಯೊಂದು ಹೇಳಿದೆ. ಅವರ ಕ್ಷೇತ್ರದಲ್ಲಿ ಸಂಭಾವ್ಯ ವಿರೋಧಿ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರವನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಪಕ್ಷವು ತಳಮಟ್ಟದಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು … Continued

ಲೋಕಸಭೆ ಚುನಾವಣೆ 2024 : ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಕೊಕ್‌…!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಹೆಸರುಗಳೊಂದಿಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ…! ಪಟ್ಟಿಯಲ್ಲಿ ಬಿಜೆಪಿ ಅಸ್ಸಾಂನ 11 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅವರಲ್ಲಿ ಆರು ಅಭ್ಯರ್ಥಿಗಳು ಹಾಲಿ ಸಂಸದರಾಗಿದ್ದರೆ ಉಳಿದ ಐವರು ಹೊಸ ಮುಖಗಳಾಗಿವೆ. 2019ರ ಸಾರ್ವತ್ರಿಕ … Continued

ರಾಜ್ಯದ ಟಾಪ್‌-10 ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ : ಈ ಹತ್ತು ದೇವಾಲಯಗಳ ಆದಾಯ ಎಷ್ಟು..? ಖರ್ಚು-ವೆಚ್ಚ ಎಷ್ಟು ?

ಬೆಂಗಳೂರು: ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಇಲಾಖೆ ವ್ಯಾಪ್ತಿಗೆ ಸೇರಿದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಮಣ್ಯ ದೇವಾಲಯ ರಾಜ್ಯದ ಶ್ರೀಮಂತ ದೇವಸ್ಥಾನವಾಗಿ ಈ ಸಲವೂ ಮುಂದುವರಿದಿದೆ. ಕಳೆದ ವರ್ಷವೂ ಈ ದೇಗುಲ ಮೊದಲ ಸ್ಥಾನದಲ್ಲಿತ್ತು. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು … Continued