ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಬೆಂಗಳೂರು | ಲಿವ್-ಇನ್ ಸಂಗಾತಿ ಕೊಲೆ ಪ್ರಕರಣ ; ನಟಿ ಸೇರಿ ಮೂವರ ಬಂಧನ

 ಬೆಂಗಳೂರು: ಬೆಂಗಳೂರಿನ ಮಂಜುನಾಥನಗರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ಸೇರಿ ತನ್ನ ಲಿವ್-ಇನ್ ಸಂಗಾತಿಯನ್ನೇ ಕಿರುತೆರೆ ನಟಿಯೊಬ್ಬಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಫೆಬ್ರವರಿ 18 ರಂದು ನಡೆದಿದ್ದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ನಟಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ … Continued

ಎಎಸ್‌ಐ ಆಗಿದ್ದ ಲಿವ್-ಇನ್ ಸಂಗಾತಿ ಕೊಂದು ಆಕೆ ನಿಯೋಜನೆಗೊಂಡಿದ್ದ ಪೊಲೀಸ್ ಠಾಣೆಗೆ ಬಂದು ಶರಣಾದ ಸಿಆರ್‌ಪಿಎಫ್ ಜವಾನ

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಶುಕ್ರವಾರ ರಾತ್ರಿ ಅವರ ಲಿವ್-ಇನ್ ಪಾರ್ಟ್ನರ್‌ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ಬೆಳಿಗ್ಗೆ ಆ ವ್ಯಕ್ತಿ ಕೊಲೆಯಾದ ಮಹಿಳಾ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದ ಪೊಲೀಸ್ ಠಾಣೆಗೆ ನಡೆದು ಬಂದು ಶರಣಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಕೊಲೆಯಾದ ಅರುಣಾಬೆನ್ ನಟುಭಾಯಿ ಜಾದವ್ … Continued

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಲಿವ್​ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು

ಬೆಂಗಳೂರು: ಲಿವ್-ಇನ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ 29 ವರ್ಷದ ಲಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು … Continued

ಹಳಸಿದ ಲಿವ್-ಇನ್ ಸಂಬಂಧ : ಪ್ರೇಯಸಿಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ದುರುಳ..!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳಲ್ಲಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದಿದ್ದಾನೆ ಎಂದು ವರದಿಯಾಗಿದೆ. ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ವರದಿಯಾಗಿದೆ. ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಮೃತಳ ಶ್ರದ್ಧಾ ಗೆಳೆಯ ಅಫ್ತಾಬ್ ಅಮೀನ್ … Continued