ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ … Continued

ಡಾ ಸರ್ವಪಲ್ಲಿ ರಾಧಾಕೃಷ್ಣನ್‌ ರಿಂದ ಎಲ್‌.ಕೆ. ಅಡ್ವಾಣಿ ವರೆಗೆ: 1954 ರಿಂದ 2024ರ ವರೆಗಿನ ʼಭಾರತ ರತ್ನʼ ಪ್ರಶಸ್ತಿ ಪುರಸ್ಕೃತರ ಪಟ್ಟಿ

ನವದೆಹಲಿ : ಬಿಜೆಪಿ ದಿಗ್ಗಜ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು 1954 ರಲ್ಲಿ ಸ್ಥಾಪಿಸಲಾಯಿತು. ಮಾನವ ಪ್ರಯತ್ನದ ಯಾವುದೇ ಕ್ಷೇತ್ರದಲ್ಲಿ ಅತ್ಯುನ್ನತ ಶ್ರೇಣಿಯ … Continued

ʼಭಾರತ ರತ್ನʼ ನೀಡಿದ್ದಕ್ಕೆ ಎಲ್‌.ಕೆ.ಅಡ್ವಾಣಿ ಬರೆದ ಕೃತಜ್ಞತಾ ಪತ್ರದಲ್ಲಿ ಸಂಸ್ಕೃತ ಮಂತ್ರದ ಉಲ್ಲೇಖ, ವಾಜಪೇಯಿಗೆ ನಮನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು, ಶುಕ್ರವಾರ ತಮಗೆ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ʼಭಾರತ ರತ್ನʼವನ್ನು ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. “ಇದು ಒಬ್ಬ ವ್ಯಕ್ತಿಯಾಗಿ ನನಗೆ ಗೌರವ ಮಾತ್ರವಲ್ಲ, ನನ್ನ ಜೀವನದುದ್ದಕ್ಕೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ನಾನು ಶ್ರಮಿಸಿದ ಆದರ್ಶಗಳು ಮತ್ತು ತತ್ವಗಳಿಗೆ ಸಹ ನೀಡಿದ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. 96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ … Continued

‘ನಾನು ಕೇವಲ ಸಾರಥಿಯಾಗಿದ್ದೆ…ದೈವಿಕ ಕನಸು ಈಡೇರಿದೆ’ : ರಾಮ ಮಂದಿರ ಉದ್ಘಾಟನೆ ಬಗ್ಗೆ ಎಲ್‌.ಕೆ.ಅಡ್ವಾಣಿ

ನವದೆಹಲಿ: ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠೆ ‘ ಕುರಿತು ಮಾತನಾಡಿದ ಮಾಜಿ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯು “ದೈವಿಕ ಕನಸನ್ನು ನನಸಾಗಿಸಿದೆ” ಎಂದು ಹೇಳಿದರು. ಈ ಹೇಳಿಕೆಯು ಎಲ್‌.ಕೆ. ಅಡ್ವಾಣಿಯವರ ರಾಮ ಮಂದಿರಕ್ಕೆ ಮೀಸಲಾದ ಲೇಖನದ ಭಾಗವಾಗಿದೆ, ಇದನ್ನು ಹಿಂದಿ ಸಾಹಿತ್ಯ ಪತ್ರಿಕೆಯಾದ ರಾಷ್ಟ್ರಧರ್ಮದಲ್ಲಿ ಪ್ರಕಟಿಸಲಾಗುತ್ತದೆ. … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ತಾರೆ ಬಿಜೆಪಿ ಹಿರಿಯ ನಾಯಕ ಎಲ್.​ಕೆ. ಅಡ್ವಾಣಿ

ನವದೆಹಲಿ: ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ತಿಳಿಸಿದ್ದಾರೆ. 96ರ ಹರೆಯದ ಎಲ್‌ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಅಗ್ರಗಣ್ಯರಾಗಿರುವ ಕಾರಣ ರಾಮಮಂದಿರ … Continued

ಅಯೋಧ್ಯೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಎಲ್‌ಕೆ ಅಡ್ವಾಣಿ, ಮುರಳಿಮನೋಹರ ಜೋಶಿಗೆ ಮನವಿ: ರಾಮಮಂದಿರ ಟ್ರಸ್ಟ್

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯರಾದ ಎಲ್‌.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣ ಮುಂದಿನ ತಿಂಗಳು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಸೋಮವಾರ ತಿಳಿಸಿದೆ. “ಇಬ್ಬರೂ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಪಾಲ್ಗೊಳ್ಳದಂತೆ … Continued

ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued