ದೂರದೃಷ್ಟಿ ಇಲ್ಲದ ಲಾಕ್‌ಡೌನ್‌ನಿಂದ ಜನರಿಗೆ ತೊಂದರೆ: ರಾಹುಲ್‌ ಟೀಕೆ

ದೂರದೃಷ್ಟಿ ಇಲ್ಲದೇ ಕಳೆದ ವರ್ಷ ಲಾಕ್‌ಡೌನ್‌ ಮಾಡಿದ್ದರಿಂದ ಈಗಲೂ ಲಕ್ಷಾಂತರ ಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅವರು ಟ್ವೀಟರ್‌ನಲ್ಲಿ, ಕೊರೊನಾ ಸೋಂಕು ಹರಡುವುನ್ನು ತಡೆಯಲು ಕೇಂದ್ರ ಸರಕಾರ ಕಳೆದ ವರ್ಷ ಮಾರ್ಚ್‌ ೨೪ರಂದು ಲಾಕ್‌ಡೌನ್‌ ಮಾಡಿತು. ಆದರೆ ಯೋಜನಾರಹಿತವಾಗಿ ಲಾಕ್‌ಡೌನ್‌ ಮಾಡಿದ್ದರಿಂದ ಬಡವರು ಹಾಗೂ ಕಾರ್ಮಿಕರು ತೊಂದರೆ ಅನುಭವಿಸಬೇಕಾಯಿತು. … Continued

ಲಾಕ್‌ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯ್ಲಿದೆ; ಒಂದು ವಾರ ಕಾದು ನೋಡ್ತೇವೆ: ಸಿಎಂ

ಬೆಂಗಳೂರು: ರಾಜ್ಯವನ್ನು ಲಾಕ್‌ ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯಲ್ಲಿದೆ. ರಾಜ್ಯವನ್ನು ಮತ್ತೊಮ್ಮೆ ಲಾಕ್‌ ಡೌನ್‌ ಮಾಡಬಾರದು ಎಂಬ ಮನಸ್ಸು ನಿಮ್ಮಲ್ಲಿದ್ದರೆ, ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಮಟ್ಟ ಹಾಕಲು ಇರುವುದು ಇದೊಂದೇ ಮಾರ್ಗ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ … Continued

ಲಾಕ್‌ಡೌನ್‌ ಪ್ರಸ್ತಾಪವಿಲ್ಲ, ಆದ್ರೆ ಜನ ನಿಯಮ ಪಾಲಿಸದಿದ್ರೆ ಅನಿವಾರ್ಯವಾಗಬಹುದು:ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಮಾಡುವ ಚಿಂತನೆ ಇಲ್ಲ ಆದರೆ, ಜನ ಸರ್ಕಾರದ ನಿಯಮ ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಎಚ್ಚರವಹಿಸಬೇಕು, ಇಲ್ಲದಿದ್ದರೆ ಲಾಕ್‌ಡೌನ್ … Continued

ಲಾಕ್‌ಡೌನ್‌ ಅವಧಿಯಲ್ಲಿ ದೆಹಲಿಯಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಳ ‌

ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಸೈಬರ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ೨೦೦೦ ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, ಮೇ ತಿಂಗಳಲ್ಲಿ ೪೦೦೦ ಪ್ರಕರಣಗಳು ದಾಖಲಾಗಿವೆ. ಶೇ.೬೨ರಷ್ಟು ಪ್ರಕರಣಗಳು ಆನ್‌ಲೈನ್‌ ಹಣ ಸಂದಾಯ ವಂಚನೆಯದಾಗಿದ್ದರೆ, ಶೇ.೨೪ರಷ್ಟು ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ್ದಾಗಿವೆ. ಶೇ.೧೪ ರಷ್ಟು ಇತರೆ ಸೈಬರ್‌ … Continued