ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ಮೊರೆನಾ : ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಅವರಿಗೆ ಸೇರಿದ ಆಸ್ತಿಗಳು ಹಾಗೂ ಕುಟುಂಬದ ಸ್ವತ್ತುಗಳು ಸರ್ಕಾರದ ವಶ ಆಗುವುದನ್ನು ತಪ್ಪಿಸಿ ಆಸ್ತಿ ಉಳಿಸಿಕೊಳ್ಳುವ ಸಲುವಾಗಿ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದು ಮಾಡಿದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಈಗ ಕಾಂಗ್ರೆಸ್ ಮತ್ತೆ ಪಿತ್ರಾರ್ಜಿತ ತೆರಿಗೆ … Continued

ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಶಾತ್, ಬಿಜೆಪಿ ನಾಯಕನಿಗೆ ತಕ್ಷಣದ ಚಿಕಿತ್ಸೆ ಸಿಕ್ಕಿದೆ ಮತ್ತು ಸ್ವಲ್ಪ ವಿರಾಮದ ನಂತರ, ವರುದ್‌ ಭಾಷಣವನ್ನು ಮುಂದುವರಿಸಲು ಸಾಧ್ಯವಾಯಿತು. ತಮ್ಮ ಭಾಷಣವನ್ನು ಪೂರ್ಣಗೊಳಿಸಿದ ಸ್ವಲ್ಪ ಸಮಯದ ನಂತರ, ಗಡ್ಕರಿ ಅವರು ಎಕ್ಸ್ (ಹಿಂದಿನ … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Continued

ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ…!

ಸೂರತ್‌ : ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ನಂತರ ಗುಜರಾತಿನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳ ಮೊದಲು ಮುಖೇಶ ದಲಾಲ್ ಅವರನ್ನು ವಿಜಯಿ ಎಂದು ಘೋಷಿಸಲಾಯಿತು. … Continued