ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ಮೊರೆನಾ : ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಅವರಿಗೆ ಸೇರಿದ ಆಸ್ತಿಗಳು ಹಾಗೂ ಕುಟುಂಬದ ಸ್ವತ್ತುಗಳು ಸರ್ಕಾರದ ವಶ ಆಗುವುದನ್ನು ತಪ್ಪಿಸಿ ಆಸ್ತಿ ಉಳಿಸಿಕೊಳ್ಳುವ ಸಲುವಾಗಿ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದು ಮಾಡಿದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಈಗ ಕಾಂಗ್ರೆಸ್ ಮತ್ತೆ ಪಿತ್ರಾರ್ಜಿತ ತೆರಿಗೆ … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Continued

ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ…!

ಸೂರತ್‌ : ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ನಂತರ ಗುಜರಾತಿನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳ ಮೊದಲು ಮುಖೇಶ ದಲಾಲ್ ಅವರನ್ನು ವಿಜಯಿ ಎಂದು ಘೋಷಿಸಲಾಯಿತು. … Continued

ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ‘ಉತ್ತಮ ಪ್ರತಿಕ್ರಿಯೆ’ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮತದಾನದ ಪ್ರಮಾಣವು ಶುಕ್ರವಾರ ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ಜನರು ದಾಖಲೆಯ ಸಂಖ್ಯೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued