ಬಿಜೆಪಿ ಪ್ರಣಾಳಿಕೆ ಬಿಡುಗಡೆ : ವೃದ್ಧರಿಗೆ ಉಚಿತ ಚಿಕಿತ್ಸೆ, ಬಡವರಿಗೆ ಉಚಿತ ಪಡಿತರ, ಏಕರೂಪ ನಾಗರಿಕ ಸಂಹಿತೆ ಜಾರಿ, ಮುದ್ರಾ ಸಾಲ ಯೋಜನೆ ಮೊತ್ತ ಹೆಚ್ಚಳ, ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ …

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿಯಂದು ಸಂಕಲ್ಪ ಪತ್ರದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್ ಹಾಗೂ ರಾಜನಾಥ್‌ ಸಿಂಗ್‌ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಲೋಕಸಭೆ ಚುನಾವಣೆ: ಇಂದಿರಾ ಗಾಂಧಿ ಹಂತಕನ ಪುತ್ರ ಫರೀದ್‌ಕೋಟದಿಂದ ಸ್ಪರ್ಧೆ

ನವದೆಹಲಿ : 2024ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟ್‌ ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹಂತಕರಲ್ಲಿ ಒಬ್ಬನಾಗಿದ್ದ ಬಿಯಾಂತ್‌ ಸಿಂಗ್‌ ಪುತ್ರನಾದ ಸರಬ್‌ಜಿತ್‌ ಸಿಂಗ್‌ ಖಲ್ಸಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪಿಯುಸಿ ಡ್ರಾಪ್‌ ಔಟ್‌ 45 ವರ್ಷದ ಸರಬ್‌ಜಿತ್‌ ಸಿಂಗ್‌ ಖಲ್ಸಾ ಅವರು 2009 ರಲ್ಲಿ ಭಟಿಂಡಾ, 2014 ರಲ್ಲಿ ಫತೇಗಢ … Continued

ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಮಾಜಿ ಸಚಿವೆ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ. ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡಿರುವ ಪೋಟೊ ಶೇರ್‌ ಮಾಡಿಕೊಂಡಿರುವ ಬಾನ್ಸುರಿ ಸ್ವರಾಜ್‌, ‘ಪ್ರಚಾರದ … Continued

ಮಾಜಿ ಸಿಎಂ ಕಮಲನಾಥ ಪುತ್ರ ನಕುಲನಾಥ ಲೋಕಸಭೆ ಚುನಾವಣೆ ಮೊದಲನೇ ಹಂತದ ಅತ್ಯಂತ ಶ್ರೀಮಂತ ಅಭ್ಯರ್ಥಿ

ನವದೆಹಲಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ ಅವರ ಪುತ್ರ ನಕುಲನಾಥ ಅವರು ಲೋಕಸಭೆ ಚುನಾವಣೆಯ 1 ನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಎಲ್ಲ ಅಭ್ಯರ್ಥಿಗಳಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಧ್ಯಪ್ರದೇಶದ ಚಿಂದ್ವಾರದಿಂದ ಸ್ಪರ್ಧಿಸಿರುವ ನಕುಲನಾಥ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 716 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ … Continued

ರಾಜಕೀಯ ಪ್ರವೇಶಿಸುವ ವದಂತಿ : ನಟ ಸಂಜಯ ದತ್ತ ಹೇಳಿದ್ದೇನು..?

ಮುಂಬೈ : ಬಾಲಿವುಡ್ ನಟ ಸಂಜಯ ದತ್ತ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 2024 ರಲ್ಲಿ ಹರಿಯಾಣದಿಂದ ಸ್ಪರ್ಧಿಸಬಹುದು ಎಂಬ ವದಂತಿಗಳ ಬಗ್ಗೆ ನಟ ಸಂಜಯ ದತ್ತ ಪ್ರತಿಕ್ರಿಯಿಸಿದ್ದಾರೆ. ಅಂತಹ ಎಲ್ಲಾ ವದಂತಿಗಳನ್ನು ತಳ್ಳಿಹಾಕಿರುವ ಅವರು ಈ ಬಗ್ಗೆ ತನ್ನ X (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಂಜಯ ದತ್ತ ಅವರು ತಮ್ಮ … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಚೀನಾ ಯತ್ನ : ಎಚ್ಚರಿಸಿದ ಮೈಕ್ರೋಸಾಫ್ಟ್

ನವದೆಹಲಿ : ಕೃತಕ ಬುದ್ಧಿಮತ್ತೆ ಸೃಷ್ಟಿಸಿದ ವಿಷಯಗಳನ್ನು ಬಳಸಿಕೊಂಡು ಭಾರತ, ಅಮೆರಿಕ ಮತ್ತು ದಕ್ಷಿಣ ಕೊರಿಯಾದಲ್ಲಿನ ಮುಂಬರುವ ರಾಷ್ಟ್ರೀಯ ಚುನಾವಣೆಗಳಿಗೆ ಅಡ್ಡಿಪಡಿಸಲು ಚೀನಾ ಸಜ್ಜಾಗುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ತೈವಾನ್‌ನ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಚೀನಾವು ಪ್ರಾಯೋಗಿಕವಾಗಿ ಈ ಆಟ ನಡೆಸಿದ ನಂತರ, ಫಲಿತಾಂಶದ ಮೇಲೆ ಪ್ರಭಾವ ಬೀರಲು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued