ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ನಕಲಿ ಲೋಕಸಭಾ ಚುನಾವಣಾ ವೇಳಾಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ

ನವದೆಹಲಿ : 2024ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶವೊಂದು ಹರಿದಾಡುತ್ತಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ ಹೇಳಿದೆ. X ನಲ್ಲಿನ ಪೋಸ್ಟ್‌ನಲ್ಲಿ, ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್‌ (WhatsApp)ನಲ್ಲಿ ನಕಲಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ ಈ ಸಂದೇಶವು ನಕಲಿಯಾಗಿದೆ. #ಚುನಾವಣಾ ಆಯೋಗದಿಂದ … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ಲೋಕಸಭೆ ಚುನಾವಣೆಯಲ್ಲಿ ʼಕೈʼ ಅಭ್ಯರ್ಥಿ ಸೋತರೆ ಸಚಿವರ ತಲೆದಂಡ…!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಈ ಜವಾಬ್ದಾರಿಯನ್ನು ನಿಭಾಯಿಸದ ಸಚಿವರ ತಲೆ … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued