2024ರ ಲೋಕಸಭೆ ಚುನಾವಣೆಗೆ 1,737 ಕೋಟಿ ರೂಪಾಯಿ ಖರ್ಚು ಮಾಡಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ವು 2024 ರ ಲೋಕಸಭೆ ಚುನಾವಣೆಗೆ 1,737.68 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿಸಲಾಗಿದೆ. ಒಟ್ಟು ಮೊತ್ತದಲ್ಲಿ 884.45 ಕೋಟಿ ರೂ.ಗಳನ್ನು ಪಕ್ಷದ ಸಾಮಾನ್ಯ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದ್ದು, 853.23 ಕೋಟಿ ರೂ.ಗಳನ್ನು ಅಭ್ಯರ್ಥಿ ಸಂಬಂಧಿತ ವೆಚ್ಚಗಳಿಗಾಗಿ ವಿನಿಯೋಗಿಸಲಾಗಿದೆ ಎಂದು ಅದು … Continued

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆ ಹೊತ್ತ ಫಡ್ನವೀಸ್‌ : ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಇಂಗಿತ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ತಮ್ಮನ್ನು ಉಪಮುಖ್ಯಮಂತ್ರಿ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ವಿನಂತಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued

ಈಗ ಚುನಾವಣೆ ನಡೆದರೆ ಎನ್‌ಡಿಎ ಎಷ್ಟು ಗೆಲ್ಲಲಿದೆ..? ಇಂಡಿಯಾ ಮೈತ್ರಿಕೂಟ ಗೆಲ್ಲುವುದೆಷ್ಟು..? : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್ ಹೇಳಿದ್ದೇನೆಂದರೆ…

ನವದೆಹಲಿ: ಈಗಲೇ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಮಂಗಳವಾರ (ಮಾರ್ಚ್ 5) ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್ (ತೃಣಮೂಲ ಕಾಂಗ್ರೆಸ್ ಇಲ್ಲದೆ) 98 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಮಮತಾ … Continued

ಮುಂಬರುವ ಲೋಕಸಭೆ ಚುನಾವಣೆಗೆ 96 ಕೋಟಿ ಮತದಾರರು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ ಮುಂದಿನ ಲೋಕಸಭಾ ಚುನಾವಣೆಗೆ 1.73 ಕೋಟಿ (18-19 ವಯೋಮಾನ) ಯುವ ಮತದಾರರು ಸೇರಿದಂತೆ 96 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜನರು ಮತ ಚಲಾಯಿಸಲು ಅರ್ಹರಾಗಿದ್ದು, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು … Continued

ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued

2024ರ ಲೋಕಸಭೆ ಚುನಾವಣೆಗೆ 16 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಾಂಗ್ರೆಸ್ ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಶುಕ್ರವಾರ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ರಾಜ್ಯಸಭಾ ಸಂಸದ ಪಿ ಚಿದಂಬರಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಿತಿಯ ಸಂಚಾಲಕನ ಸ್ಥಾನವನ್ನು ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್. ಸಿಂಗ್ ದೇವ್ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 16 ಸದಸ್ಯರು … Continued

ಲೋಕಸಭೆ ಚುನಾವಣೆಗೆ ಸ್ಪರ್ಧೆ: ಕಂಗನಾ ರಣಾವತ್ ಹೇಳಿದ್ದೇನು..?

ದ್ವಾರಕಾ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ. ಶ್ರೀಕೃಷ್ಣ ಕೃಪೆ ತೋರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದ್ವಾರಕಾದಲ್ಲಿರುವ ಶ್ರೀಕೃಷ್ಣನ ದ್ವಾರಕದೀಶ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ … Continued