ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸ್ವೀಪ್, ತೆಲಂಗಾಣ, ತಮಿಳುನಾಡಿನಲ್ಲಿ ಬಿಜೆಪಿ ಗಮನಾರ್ಹ ಸಾಧನೆ; ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌

ಬೆಂಗಳೂರು : 2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಭವಿಷ್ಯ ನುಡಿದಿದೆ. ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಸೋಮವಾರ (ಮಾರ್ಚ್ 4) ಪ್ರಕಟವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ … Continued

ಲೋಕಸಭೆ ಚುನಾವಣೆ : ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ, ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು, ಮಂಗಳವಾರ (ಮಾರ್ಚ್‌ 2) ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಲೋಕಸಭೆಗೆ ಚುನಾವಣಾ ಘೋಷಣೆ ದಿನಾಂಕ ಘೋಷಿಸುವ ಮೊದಲೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರು ಲೋಕಸಭೆ … Continued

ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು

ಅಗರ್ತಲಾ : ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ವಿಪಕ್ಷವಾದ ಕಾಂಗ್ರೆಸ್‌ನ ಇಬ್ಬರು ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಇಬ್ಬರು ಶಾಸಕರು ಮುಖ್ಯಮಂತ್ರಿ ಪೆಮಾ ಖಂಡು ಅವರ ಸಮ್ಮುಖದಲ್ಲಿ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕರಾದ ನಿನೊಂಗ್ ಎರಿಂಗ್, ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ಮತದಾನದ ಸಮಯದಲ್ಲಿ ಪ್ಲಾಟ್‌ಫಾರ್ಮ್‌ಗಳ ತಟಸ್ಥತೆಗೆ ಒತ್ತಾಯಿಸಿ ಫೇಸ್‌ಬುಕ್, ಗೂಗಲ್ ಸಿಇಒಗಳಿಗೆ ಪತ್ರ ಬರೆದ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ

ನವದೆಹಲಿ : ದೇಶದಲ್ಲಿ “ಕೋಮು ದ್ವೇಷಕ್ಕೆ” ಸಹಾಯ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರದ ಕುರಿತು ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ ಬಣವು ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದೆ ಮತ್ತು ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ವೇದಿಕೆಗಳು ʼತಟಸ್ಥತೆʼ ಕಾಯ್ದುಕೊಳ್ಳಬೇಕೆಂದು ಒತ್ತಾಯಿಸಿದೆ. ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯು ಆಡಳಿತಾರೂಢ … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued