ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆ : ಸಿಗದ ಮೂರನೇ ಎರಡರಷ್ಟು ಬಹುಮತ

ನವದೆಹಲಿ: ಕೇಂದ್ರ ಸರ್ಕಾರವು ಮಂಡಿಸಿದ್ದ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕವು ಶುಕ್ರವಾರ ಲೋಕಸಭೆಯಲ್ಲಿ ಅಗತ್ಯ ಮತಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಸಂವಿಧಾನದ (131ನೇ ತಿದ್ದುಪಡಿ) ವಿಧೇಯಕ, 2026 ಅನ್ನು ಅಂಗೀಕರಿಸಲು ಕೇಂದ್ರಕ್ಕೆ ಮೂರನೇ ಎರಡರಷ್ಟು (2/3) ಬಹುಮತದ ಅಗತ್ಯವಿತ್ತು. ಆದರೆ ಮತದಾನದ ವೇಳೆ ವಿಧೇಯಕದ ಪರವಾಗಿ ೨೯೮ ಸಂಸದರು ಮತ್ತು ವಿರುದ್ಧವಾಗಿ 230 ಸಂಸದರು ಮತ ಚಲಾಯಿಸಿದರು. … Continued

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಾಯ್ದೆ ಜಾರಿ

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ‘ಮಹಿಳಾ ಮೀಸಲಾತಿ ಕಾಯ್ದೆ, 2023’ (ನಾರಿ ಶಕ್ತಿ ವಂದನ್ ಅಧಿನಿಯಮ) ಏಪ್ರಿಲ್ 16, 2026 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಾಯ್ದೆ ಜಾರಿಗೆ ಬಂದಿದ್ದರೂ, ಪ್ರಸಕ್ತ ಲೋಕಸಭೆಯಲ್ಲಿ ಈ ಮೀಸಲಾತಿ ಅನ್ವಯವಾಗುವುದಿಲ್ಲ. ಮುಂದಿನ ಜನಗಣತಿಯ … Continued

ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued

ಲೋಕಸಭಾ ಸ್ಥಾನಗಳ ಸಂಖ್ಯೆ 850ಕ್ಕೆ ಏರಿಕೆ? ಶೇ. 33 ಮಹಿಳಾ ಮೀಸಲಾತಿ-ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ಸಿದ್ಧತೆ

ನವದೆಹಲಿ: ದೀರ್ಘಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಮತ್ತು ಹೊಸ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಚಾಲನೆ ನೀಡಲು ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳನ್ನು ಸದ್ಯದ 543 ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಸದಸ್ಯ ಬಲದ ಹೆಚ್ಚಳವನ್ನು ಒಳಗೊಂಡ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ … Continued

ವೀಡಿಯೊ..| ಲೋಕಸಭೆಯಲ್ಲಿ ಮಂಡಿಸಿದ ಬಂಧಿತ ಸಚಿವರ ವಜಾಗೊಳಿಸುವ ಮಸೂದೆ ಪ್ರತಿಗಳನ್ನು ಹರಿದು ಅಮಿತ್ ಶಾ ಮೇಲೆ ಎಸೆದ ವಿಪಕ್ಷಗಳು

ನವದೆಹಲಿ: ಗೃಹ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಕ್ರಿಮಿನಲ್‌ ಪ್ರಕರಣದಲ್ಲಿ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಪದಚ್ಯುತಗೊಳಿಸಬಹುದು ಎಂಬ ಮಸೂದೆಯನ್ನುಲೋಕಸಭೆಯಲ್ಲಿ ಮಂಡಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು. ಸಂವಿಧಾನ (130 ನೇ ತಿದ್ದುಪಡಿ) ಮಸೂದೆ, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) … Continued

ನ್ಯಾ. ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಲೋಕಸಭಾ ಸ್ಪೀಕರ್

ನವದೆಹಲಿ: ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಮೂವರು ಸದಸ್ಯರ ಸಮಿತಿ ರಚಿಸಿದ್ದು, ನ್ಯಾ. ವರ್ಮಾ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ಔಪಚಾರಿಕವಾಗಿ … Continued

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ; ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತ

ಬರೇಲಿ : ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಗುರುವಾರ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಅಂಗೀಕಾರವಾಗಿದ್ದನ್ನು ಸ್ವಾಗತಿಸಿದ್ದಾರೆ. ಇದು ಬಡ ಹಾಗೂ ಹಿಂದುಳಿದ ಮುಸ್ಲಿಮರಿಗೆ ಗಮನಾರ್ಹ ಆರ್ಥಿಕ ಲಾಭ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಮಸೂದೆಯ ಪರವಾಗಿ ಮತ ಚಲಾಯಿಸಿದ ಎಲ್ಲಾ ಲೋಕಸಭಾ ಸದಸ್ಯರಿಗೆ ನಾನು … Continued

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2024 ಮಂಡನೆ ; ಮಸೂದೆಯ ಪ್ರಮುಖ ಬದಲಾವಣೆ ಸೆಕ್ಷನ್ 40ರ ರದ್ದತಿ ; ಇತರ ಪ್ರಮುಖ ಅಂಶಗಳೆಂದರೆ…

ನವದೆಹಲಿ : ವಿಪಕ್ಷಗಳ ಆಕ್ಷೇಪ ಹಾಗೂ ಭಾರೀ ಗದ್ದಲದ ನಡುವೆ ವಕ್ಫ್ (ತಿದ್ದುಪಡಿ) ಮಸೂದೆ-2024 ಲೋಕಸಭೆಯಲ್ಲಿ ಬುಧವಾರ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರೆನ್‌ ರಿಜಿಜು ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಸೂದೆ ಮಂಡಿಸಿದರು. ವಕ್ಫ್ ಆಸ್ತಿಗಳ ನಿಯಂತ್ರಣಕ್ಕಾಗಿ 1995ರ ವಕ್ಫ್ ಕಾಯಿದೆಯನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮೊದಲ ಬಾರಿಗೆ ಆಗಸ್ಟ್ 2024ರಲ್ಲಿ ಲೋಕಸಭೆಯಲ್ಲಿ … Continued

ವಕ್ಫ್ (ತಿದ್ದುಪಡಿ) ಮಸೂದೆ-2024 ; ಇಂದು ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ-2024 ಬುಧವಾರ (ಏಪ್ರಿಲ್ 2)ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆ-2024 ಅನ್ನು ಬುಧವಾರ ಮಂಡಿಸಲಾಗುತ್ತದೆ ಮಂಗಳವಾರ ಪ್ರಕಟಿಸಿದರು. ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಪ್ರಶ್ನೋತ್ತರ ಅವಧಿಯ ನಂತರ ಮಸೂದೆಯನ್ನು ಮಂಡಿಸಲಾಗುವುದು, ನಂತರ 8 ಗಂಟೆಗಳ ಚರ್ಚೆಯ ನಂತರ ಅದನ್ನು … Continued

ಲೋಕಸಭೆಯಲ್ಲಿ ವಲಸೆ ಮಸೂದೆ-2025 ಅಂಗೀಕಾರ : ಭಾರತ ಧರ್ಮಛತ್ರವಲ್ಲ ಎಂದ ಅಮಿತ್ ಶಾ

ನವದೆಹಲಿ: ಲೋಕಸಭೆಯು ಇಂದು, ಗುರುವಾರ ವಲಸೆ ಮತ್ತು ವಿದೇಶಿಯರ ಮಸೂದೆ, 2025 (Immigration and Foreigners Bill, 2025) ಅನ್ನು ಅಂಗೀಕರಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಪರವಾಗಿ ಕಿರಿಯ ಗೃಹ ಸಚಿವ ನಿತ್ಯಾನಂದ ರೈ ಅವರು ಮಸೂದೆಯನ್ನು ಮಂಡಿಸಿದರು. ಮಸೂದೆಯ ಮೇಲಿನ ಮೂರು ಗಂಟೆಗಳ ಸುದೀರ್ಘ ಚರ್ಚೆಯ ಕೊನೆಯಲ್ಲಿ, ಅಭಿವೃದ್ಧಿಗೆ ಸಹಾಯ ಮಾಡಲು … Continued