ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ಲೋಕಸಭೆ ಚುನಾವಣೆ ನಂತರದ ಮೊದಲ ಸಂಸತ್ ಅಧಿವೇಶನ ಜೂನ್ 24ರಿಂದ ಆರಂಭ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ. ರಾಷ್ಟ್ರಪತಿ ದ್ರೌಪದಿ … Continued

ಜನರು 3ನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ, ಐತಿಹಾಸಿಕ ಕ್ಷಣ : ಚುನಾವಣಾ ಫಲಿತಾಂಶಗಳ ನಂತರ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸತತ ಮೂರನೇ ಗೆಲುವು ತಂದುಕೊಟ್ಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರು ಸತತ ಮೂರನೇ ಬಾರಿಗೆ ಎನ್‌ಡಿಎಯಲ್ಲಿ ನಂಬಿಕೆ ಇಟ್ಟಿರುವುದು ಭಾರತದ ಇತಿಹಾಸದಲ್ಲಿ ಐತಿಹಾಸಿಕ ಸಾಧನೆಯಾಗಿದೆ” ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. “ಜನತಾ ಜನಾರ್ದನರ ಈ ಪ್ರೀತಿಗಾಗಿ ನಾನು ನಮಸ್ಕರಿಸುತ್ತೇನೆ ಮತ್ತು … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮುಂಬೈ: ಲೋಕಸಭೆ ಚುನಾವಣೆಗೆ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಮ್ಮುಖದಲ್ಲಿ ಬಾಲಿವುಡ್‌ ಜನಪ್ರಿಯ ನಟ ಗೋವಿಂದ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಹಿಂದಿನ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಗೋವಿಂದ ಅವರು ಇಂದು, ಗುರುವಾರ (ಮಾರ್ಚ್‌ ೨೮) ಬಾಳಾಸಾಹೇಬ ಭವನದಲ್ಲಿ ಶಿವಸೇನೆಗೆ ಸೇರಿದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಮುಂಬೈ ವಾಯವ್ಯ ಲೋಕಸಭಾ … Continued

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸಲು ʼಲೋಕಪಾಲʼ ಆದೇಶ

ನವದೆಹಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ (ಪಿಸಿಎ) ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಪಾಲವು ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು ಬಲವಾದ ಪುರಾವೆಗಳಿವೆ ಎಂದು ನ್ಯಾಯಾಂಗ ಸದಸ್ಯೆ ನ್ಯಾ. ಅಭಿಲಾಷಾ ಕುಮಾರಿ, ಸದಸ್ಯರಾದ ಅರ್ಚನಾ ರಾಮಸುಂದರಂ ಹಾಗೂ ಮಹೇಂದರ್ ಸಿಂಗ್ ಅವರನ್ನೊಳಗೊಂಡ … Continued

ಒಂದು ರಾಷ್ಟ್ರ. ಒಂದು ಚುನಾವಣೆ: ರಾಷ್ಟ್ರಪತಿಗೆ 18,626 ಪುಟಗಳ ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ. ಪಕ್ಷಗಳು, ತಜ್ಞರು ಮತ್ತು ಇತರ ಮಧ್ಯಸ್ಥಗಾರರ ಸಲಹೆಗಳ ಆಧಾರದ ಮೇಲೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳು ನಡೆಯಬೇಕು ಎಂದು ಸರ್ವಾನುಮತದ ಅಭಿಪ್ರಾಯವಿದೆ ಎಂದು ವರದಿ ಸಲಹೆ ನೀಡಿದೆ. ಏಕಕಾಲದ … Continued

ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ‌ತಮ್ಮನ್ನು ಲೋಕಸಭೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭಾ ಸಚಿವಾಲಯಕ್ಕೆ ಸೂಚಿಸಿದೆ. ಹಾಗೂ ಮೊಯಿತ್ರಾ ಅವರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರ ಪೀಠವು ಲೋಕಸಭಾ ಸಚಿವಾಲು ಎರಡು ವಾರಗಳಲ್ಲಿ … Continued

ಕಲಾಪಕ್ಕೆ ಅಡ್ಡಿ: ಡಿ.ಕೆ ಸುರೇಶ ಸೇರಿದಂತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ : ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ( ಡಿಸೆಂಬರ್‌ 21) ಸಂಸತ್ತಿನಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು. ನಂತರ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ, ದೀಪಕ ಬೈಜ್ ಮತ್ತು ನಕುಲ ನಾಥ ಅವರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಲೋಕಸಭೆಯಿಂದ ಅಮಾನತುಗೊಂಡ … Continued

97 ಅಮಾನತು ಸಂಸದರ ಅನುಪಸ್ಥಿತಿಯಲ್ಲಿ ಮೂರು ಕ್ರಿಮಿನಲ್ ಕಾನೂನು ಮಸೂದೆಗಳು ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ; ದೇಶದಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಮತ್ತು “ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯ ವ್ಯವಸ್ಥೆಯನ್ನು” ಸ್ಥಾಪಿಸುವ ಗುರಿ ಹೊಂದಿರುವ ಮೂರು ಪರಿಷ್ಕೃತ ಕ್ರಿಮಿನಲ್ ಕಾನೂನು ಮಸೂದೆಗಳನ್ನು ಲೋಕಸಭೆ ಬುಧವಾರ ಅಂಗೀಕರಿಸಿತು. ಭಾರತೀಯ ನ್ಯಾಯ ಸಂಹಿತಾ ಮಸೂದೆಗಳು ಭಾರತೀಯ ದಂಡ ಸಂಹಿತೆಯನ್ನು ಬದಲಿಸುವ ಬಗ್ಗೆ ಪ್ರಸ್ತಾಪಿಸುತ್ತದೆ, ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ ಕ್ರಿಮಿನಲ್ … Continued