ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯದ ಮಿತಿಗಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ಮಂಗಳವಾರ ಬೆಳ್ಳಬೆಳಿಗ್ಗೆ (ಸೆಪ್ಟೆಂಬರ್ 22) ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಹುಬ್ಬಳ್ಳಿ, ಕಲಬುರಗಿ, ಚಿಕ್ಕಬಳ್ಳಾಪುರ, ಬೀದರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ ಎಂದು … Continued

ಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ; ₹12.95 ಕೋಟಿ ಅಕ್ರಮ ಆಸ್ತಿ, 100 ಎಕರೆ ಕೃಷಿ ಭೂಮಿ ಪತ್ತೆ

ಬೆಂಗಳೂರು: ಆದಾಯದಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ಬೆಂಗಳೂರಿನ ವಿಶೇಷ ಭೂಸ್ವಾಧೀನ ಅಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ್ದ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಅಧಿಕಾರಿಯು 100 ಎಕರೆ ಕೃಷಿ ಭೂಮಿ ಹೊಂದಿರುವುದು ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ, ಗುಡ್ಡದಹಳ್ಳಿ, ಹೆಬ್ಬಾಳ ಸೇರಿದಂತೆ ಹಲವು … Continued

ಮುಂಡಗೋಡ | ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮಂಗಳವಾರ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರಲೋಕಾಯುಕ್ತ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಹೆಸ್ಕಾಂ ಉಪವಿಭಾಗದ ಎಇಇ ಹಾಗೂ ಕಂದಾಯ ನಿರೀಕ್ಷಕ ಪ್ರತ್ಯೇಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ … Continued

ಹುಬ್ಬಳ್ಳಿ: 6 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಉಪ ಆಯುಕ್ತ

ಹುಬ್ಬಳ್ಳಿ: ತೆರಿಗೆ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರನ್ನು (Deputy Commissioner) ಲೋಕಾಯುಕ್ತ ಪೊಲೀಸರು ಸೋಮವಾರ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಅಧಿಕಾರಿಯನ್ನು ಭರತಕುಮಾರ ಹೆಗಡೆ (48) ಎಂದು ಗುರುತಿಸಲಾಗಿದೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜೀತ ನಾಯಕ್ (53) ಎಂಬವರಿಂದ 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾ … Continued

ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, … Continued

ಬೆಳ್ಳಂಬೆಳಿಗ್ಗೆ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು, ಬುಧವಾರ ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಆಗಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಸೇರಿದ ಮನೆ, ಆಸ್ತಿ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಚಿಕ್ಕಮಗಳೂರು, ಬೀದರ, ಗದಗ, … Continued

4 ಲಕ್ಷ ರೂ. ಲಂಚ ಪಡೆದ ಆರೋಪ ; ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿಯೊಂದರ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ.ಗಳ ಲಂಚ ಪಡೆದ ಆರೋಪದ ಮೇಲೆ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ ಅವರನ್ನು ಗುರುವಾರ (ಡಿ.19) ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ಕಚೇರಿಗೆ ಅರ್ಜಿ … Continued

ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued