ಶಿರಸಿ : ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಜಿಲ್ಲಾ ಪಂಚಾಯತ ವಿಭಾಗೀಯ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲೆಕ್ಕಪರಿಶೋಧಕ ಮಲ್ಲಿಕಾರ್ಜುನ ಪಾಟೀಲ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡಿನ ಗುತ್ತಿಗೆದಾರ ನಾಗರಾಜ ಕಟ್ಟಿಮನೆ ಎಂಬವರ ಬಳಿ ಗುತ್ತಿಗೆ ಕೆಲಸದ ಬಿಲ್ ಮಾಡಲು ಕೇಳಿದ್ದ 10 ಸಾವಿರ … Continued

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯದ ಮಿತಿಗಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ಮಂಗಳವಾರ ಬೆಳ್ಳಬೆಳಿಗ್ಗೆ (ಸೆಪ್ಟೆಂಬರ್ 22) ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಹುಬ್ಬಳ್ಳಿ, ಕಲಬುರಗಿ, ಚಿಕ್ಕಬಳ್ಳಾಪುರ, ಬೀದರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ ಎಂದು … Continued

ಬೆಂಗಳೂರು: ₹8 ಲಕ್ಷ ಲಂಚ ಪಡೆಯುತ್ತಿದ್ದ ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಅಧೀಕ್ಷಕರೊಬ್ಬರು ₹8 ಲಕ್ಷ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಾಚರಣೆಯ ದೃಶ್ಯಗಳು ಕ್ಯಾಮೆರಾದಲ್ಲೂ ಸೆರೆಯಾಗಿವೆ. ಬಂಧಿತ ಅಧಿಕಾರಿಯನ್ನು ದಕ್ಷಿಣ ಕಮಿಷನರೇಟ್‌ನ ದಕ್ಷಿಣ ವಿಭಾಗ–4ರ ಕೇಂದ್ರ ಜಿಎಸ್‌ಟಿ (GST) ಅಧೀಕ್ಷಕ ಮೋಹಿತ್ ಪ್ರತಾಪ ಸಿಂಗ್ ಎಂದು ಗುರುತಿಸಲಾಗಿದೆ. ಲೋಕಾಯುಕ್ತದ … Continued

ಮುಂಡಗೋಡ | ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮಂಗಳವಾರ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರಲೋಕಾಯುಕ್ತ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಹೆಸ್ಕಾಂ ಉಪವಿಭಾಗದ ಎಇಇ ಹಾಗೂ ಕಂದಾಯ ನಿರೀಕ್ಷಕ ಪ್ರತ್ಯೇಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ … Continued

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ : ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಭಾಷಣದ ವೇಳೆ ಅಸ್ವಸ್ಥಗೊಂಡು ದಿಢೀರ್‌ ಕುಸಿದು ಬಿದ್ದಿದ್ದು ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ವೇದಿಕೆಯಲ್ಲಿ ಮಾತಾಡುತ್ತಿದ್ದ … Continued

ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿಯ ಬಿಜೆಪಿ ಶಾಸಕ

ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, … Continued

ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, … Continued

ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ 11000 ಪುಟಗಳ ವರದಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ಇಂದು, ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ (Lokayukta) ಪೊಲೀಸ್ ಟಿ.ಉದೇಶ ಅವರು ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ,  ಸಿದ್ಧಾರಮಯ್ಯ ಹಾಗೂ ಇತರ ಮೂವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಅವರಿಗೆ ಕ್ಲೀನ್‌ಚಿಟ್‌ನೀಡಿದ್ದಾರೆ. … Continued

ಮುಡಾ ಪ್ರಕರಣ : ಹೈಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಗಳಿಕೆ ಆರೋಪ ; ಲೋಕಾಯುಕ್ತಕ್ಕೆ ಮತ್ತೊಂದು ದೂರು

ಮೈಸೂರು: ಮುಡಾ ನಿವೇಶನ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು (Benami Property) ಸಲ್ಲಿಸಿದ್ದಾರೆ. ಆಲನಹಳ್ಳಿ ಗ್ರಾಮದ ಸರ್ವೇ ನಂಬರ್ 113/4ರ ಒಂದು ಎಕರೆ ಜಮೀನಿಗೆ ಸಂಬಂಧಿಸಿದ ವಿಚಾರಕ್ಕೆ ಸಿದ್ದರಾಮಯ್ಯ … Continued