ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued

ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ … Continued

ಮುಡಾ ಹಗರಣ | ವಿಚಾರಣೆಗೆ ಹಾಜರಾಗಿ ; ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಸಮನ್ಸ್‌

ಮೈಸೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ಲೋಕಾಯುಕ್ತ ಪೊಲೀಸರು (Lokayukta Police) ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರಿಗೆ … Continued

ಬೆಳಗಾವಿ ಜಿಲ್ಲೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಬೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ ಶನಿವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎನ್.ಆರ್​. ರಮೇಶ್ ಅವರು 400ಕ್ಕೂ ಹೆಚ್ಚು … Continued

ಜಮೀನು ಒತ್ತುವರಿ ಆರೋಪ ; ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಖ್ಯಾತ ಬಾಲಿವುಡ್ ಗಾಯಕ

ಬೆಂಗಳೂರು: ಭೂಮಿ ಒತ್ತುವರಿ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ, ಸರ್ವೇಯರ್ … Continued