ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued

ದೆಹಲಿಗೆ ಹೋದರೂ ಈಶ್ವರಪ್ಪ ಭೇಟಿಯಾಗದ ಅಮಿತ್‌ ಶಾ….!

ಬೆಂಗಳೂರು: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಆಹ್ವಾನದ ಮೇರೆಗೆ ಬುಧವಾರ ದೆಹಲಿಗೆ ತೆರಳಿದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್‌ ಬಂದಿದ್ದಾರೆ. ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ತಮಗೆ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು ಎಂಬುದಾಗಿ ಈಶ್ವರಪ್ಪ ಹೇಳಿದ್ದರು. … Continued

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು … Continued

ಲೋಕಸಭೆ ಚುನಾವಣೆ : ಬಿಜೆಪಿಯಿಂದ 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ನಟ ಸನ್ನಿ ದಿಯೋಲಗೆ ಟಿಕೆಟ್‌ ನಿರಾಕರಣೆ

ನವದೆಹಲಿ: ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ 11 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಇತ್ತೀಚಿನ ಪಟ್ಟಿಯಲ್ಲಿ, ಬಿಜೆಪಿ ಪಕ್ಷವು ಒಡಿಶಾದಿಂದ ಮೂವರು, ಪಂಜಾಬ್‌ನಿಂದ ಆರು ಮತ್ತು ಪಶ್ಚಿಮ ಬಂಗಾಳದಿಂದ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ. ಪಟ್ಟಿಯಲ್ಲಿ, ನಟ ಮತ್ತು ಹಾಲಿ ಗುರುದಾಸಪುರ ಸಂಸದ ಸನ್ನಿ ಡಿಯೋಲ್ ಬದಲಿಗೆ ದಿನೇಶ್ … Continued

ಲೋಕಸಭೆ ಚುನಾವಣೆ: ಏ.3 ರಂದು ಮಂಡ್ಯದಲ್ಲೇ ಮತ್ತೊಂದು ಸಭೆ ನಡೆಸಿದ ನಂತರ ನಿರ್ಧಾರ ಪ್ರಕಟಿಸ್ತೇನೆ ; ಬೆಂಗಳೂರು ಸಭೆ ನಂತ್ರ ಸುಮಲತಾ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಚರ್ಚಿಸಿ ತನ್ನ ನಿರ್ಧಾರವನ್ನ ಇಂದು ಪ್ರಕಟಿಸುವುದಾಗಿ ತಿಳಿಸಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ ಶನಿವಾರ (ಮಾರ್ಚ್‌ ೩೦) ಮಂಡ್ಯ ಲೋಕಸಭಾ ಕ್ಷೇತ್ರದ ಅಭಿಮಾನಿಗಳ ಸಭೆಯ ನಂತರ ಏಪ್ರಿಲ್ 3ಕ್ಕೆ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ … Continued

ಲೋಕಸಭಾ ಚುನಾವಣೆ : ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಭಾರೀ ಸಿದ್ಧತೆ ನಡೆಸಿರುವ ಬಿಜೆಪಿ ಕರ್ನಾಟಕದಲ್ಲಿ ಜೆಡಿಎಸ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಅದು ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, … Continued