ಸುಮಲತಾ ಭೇಟಿ ಮಾಡಿದ ವಿಜಯೇಂದ್ರ : ಭೇಟಿ ನಂತರ ಸುಮಲತಾ ಹೇಳಿದ್ದೇನು..?

ಬೆಂಗಳೂರು : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಂಡ್ಯದ ಸಂಸದೆ ಸುಮಲತಾರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಪ್ರೀತಂ ಗೌಡ ಅವರ ಜೊತೆ ಸುಮಲತಾ ನಿವಾಸಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಬಿಜೆಪಿ ಸೇರ್ಪಡೆಯಾಗುವಂತೆ ಮನವಿ … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued

ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. … Continued

ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆ : ಬಿಜೆಪಿ ಸೇರುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ, ಕೆಆರ್‌ಪಿಪಿ ಪಕ್ಷವೂ ಬಿಜೆಪಿಯಲ್ಲಿ ವಿಲೀನ..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಬಳ್ಳಾರಿ, … Continued

ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ವಿಕಸಿತ ಭಾರತ ಸಂದೇಶ ಕಳಿಸುವುದನ್ನು ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ಸೂಚನೆ

ನವದೆಹಲಿ: ‘ವಿಕಸಿತ ಭಾರತ ಸಂಪರ್ಕ’ ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಈ ವಿಷಯದ ಬಗ್ಗೆ ದೂರುಗಳು ಬಂದ ನಂತರ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಈ ನಿರ್ದೇಶನ ನೀಡಿದೆ. ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶವನ್ನು ಖಾತ್ರಿಪಡಿಸುವ ಗುರಿಯನ್ನು … Continued