ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ 24 ಸ್ಥಾನಗಳಲ್ಲಿ ಗೆಲ್ಲಬಹುದು.; ಮೂಡ್ ಆಫ್ ದಿ ನೇಷನ್ ಸಮೀಕ್ಷೆ

ನವದೆಹಲಿ: ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್‌ ಸಮೀಕ್ಷೆ’ ತಿಳಿಸಿದೆ. ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued