ವಿದ್ಯುತ್ ಕಳ್ಳತನದ ಆರೋಪ ; ಸಮಾಜವಾದಿ ಪಕ್ಷದ ಸಂಸದರಿಗೆ ₹ 1.9 ಕೋಟಿ ದಂಡ..!

ಲಕ್ನೋ:  ಸಮಾಜವಾದಿ ಪಕ್ಷದ ಉತ್ತರ ಪ್ರದೇಶದ  ಸಂಭಾಲ್ ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್ ತಮ್ಮ ನಿವಾಸದಲ್ಲಿ ವಿದ್ಯುತ್ ಕಳ್ಳತನ ಮಾಡಿದ ಆರೋಪಿತ ಪ್ರಕರಣದಲ್ಲಿ ಅವರಿಗೆ ₹ 1.91 ಕೋಟಿ ದಂಡ ವಿಧಿಸಲಾಗಿದೆ. ಸಂಸದರ ನಿವಾಸದಲ್ಲಿ ಎರಡು ವಿದ್ಯುತ್ ಮೀಟರ್‌ಗಳನ್ನು ಟ್ಯಾಂಪರಿಂಗ್ ಮಾಡಿರುವ ಪುರಾವೆಗಳು ಕಂಡುಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ವಿದ್ಯುತ್ ಇಲಾಖೆ ಈ ದಂಡ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ಲೋಕಸಭೆ ಅಧಿವೇಶನ : ಮಂಡ್ಯ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ನವದೆಹಲಿ: ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್‌ ಆದ ಅವರು ಭಾನುವಾರ ಲೋಕಸಭೆಯ ಸದಸ್ಯರಿಗೆ ಪ್ರಮಾಣ ವಚನ ಭೋದನೆ ಮಾಡುತ್ತಿದ್ದು, ಮಂಡ್ಯ ಸಂಸದರಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್​.ಡಿ ಕುಮಾರಸ್ವಾಮಿ ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಭಾನುವಾರ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. … Continued

ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ … Continued

ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ :ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದ್ಯತೆ ನೀಡುವ ಸಲುವಾಗಿ ಸೆಪ್ಟೆಂಬರ್‌ 1ರ ಆದೇಶಕ್ಕೆ ತಡೆ ನೀಡುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಪೀಠ … Continued