ವೀಡಿಯೊ..| ರೈಲಿನ ಹವಾನಿಯಂತ್ರಣದ ಬಗ್ಗೆ ದೂರು ನೀಡಿದ್ರೆ ತಪಾಸಣೆ ವೇಳೆ ಎಸಿ ಡಕ್ಟ್‌ನಲ್ಲಿ ಮದ್ಯದ ಬಾಟಲಿಗಳು ಪತ್ತೆ…!

ನವದೆಹಲಿ: ಲಕ್ನೋ-ಬರೌನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹವಾನಿಯಂತ್ರಣ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದ ಬಗ್ಗೆ ದಿನನಿತ್ಯದ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆಗೆ ಹೋದಾಗ ಎಸಿ-2 ಟೈರ್ ಕೋಚ್‌ನ ಎಸಿ ಡಕ್ಟ್‌ನಲ್ಲಿ ಅಡಗಿಸಿಟ್ಟಿದ್ದ ನೂರಾರು ವಿಸ್ಕಿ ಬಾಟಲಿಗಳು ಪತ್ತೆಯಾಗಿವೆ. ಪ್ರಯಾಣಿಕರು ಕೂಲಿಂಗ್ ವ್ಯವಸ್ಥೆಯಲ್ಲಿನ ತೊಂದರೆ ಇರುವ ವರದಿ ಮಾಡಿದಾಗ ಇದು ಬೆಳಕಿಗೆ ಬಂದಿದೆ. ದೂರಿನ ನಂತರ ತಾಂತ್ರಿಕ ತಪಾಸಣೆ ನಡೆಸಿದಾಗ 32 … Continued

ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ

ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued

ವೀಡಿಯೊ…| ಬಾಲಿವುಡ್‌ ನಟರಾದ ಅಕ್ಷಯಕುಮಾರ, ಟೈಗರ್ ಶ್ರಾಫ್ ಕಾರ್ಯಕ್ರಮದಲ್ಲಿ ಜನಸಮೂಹದಿಂದ ಕಲ್ಲು ತೂರಾಟ-ಚಪ್ಪಲಿ ಎಸೆತ-ಲಾಠಿ ಚಾರ್ಜ್‌

ನವದೆಹಲಿ : ಸೋಮವಾರ, ಲಕ್ನೋದಲ್ಲಿ ನಡೆದ ಬಾಲಿವುಡ್ ನಟರಾದ ಅಕ್ಷಯಕುಮಾರ ಮತ್ತು ಟೈಗರ್ ಶ್ರಾಫ್ ತಮ್ಮ ಮುಂಬರುವ ಚಿತ್ರ ಬಡೇ ಮಿಯಾನ್ ಚೋಟೆ ಮಿಯಾನ್ ಪ್ರಚಾರ ಕಾರ್ಯಕ್ರಮವು ಅನಿರೀಕ್ಷಿತ ಘಟನೆಗಳಿಗೆ ಸಾಕ್ಷಿಯಾಯಿತು. ಇಬ್ಬರೂ ತಮ್ಮ ಉತ್ಸಾಹಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲು ಘಂಟಾಘರ್‌ ನಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಜನಸ್ತೋಮವು ಉನ್ಮಾದಕ್ಕೆ … Continued

ಲಕ್ನೋದಿಂದ 6 ದಿನ ಕಾಲ್ನಡಿಗೆಯಲ್ಲಿ ತೆರಳಿ ಅಯೋಧ್ಯೆಯ ಭಗವಾನ್‌ ʼರಾಮಲಲ್ಲಾʼ ದರ್ಶನ ಪಡೆದ 350 ಮಂದಿ ಮುಸ್ಲಿಮರು….!

ಅಯೋಧ್ಯೆ: ರಾಮಲಲ್ಲಾ ದರ್ಶನ ಪಡೆದು ಪೂಜೆ ಸಲ್ಲಿಸುವ ಸಲುವಾಗಿ ಆರು ದಿನಗಳ ಪಾದಯಾತ್ರೆ ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಬುಧವಾರ ಅಯೋಧ್ಯೆಗೆ ತಲುಪಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ (MRM) ಅಡಿಯಲ್ಲಿ ಗುಂಪು ಜನವರಿ 25 ರಂದು ಲಕ್ನೋದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿತು ಎಂದು ಎಂಆರ್‌ಎಂ … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಕ್ಯಾನ್ಸರ್ ವಿರುದ್ಧ ಹೋರಾಡುತ್ತಲೇ 12ನೇ ತರಗತಿ ಪರೀಕ್ಷೆಯಲ್ಲಿ 97.75% ಅಂಕ ಪಡೆದ ಈ ವಿದ್ಯಾರ್ಥಿನಿ…!

ಲಕ್ನೋ: ಕ್ಯಾನ್ಸರ್‌ನಿಂದ ಬಳಲುತ್ತಿರುವ 17 ವರ್ಷದ ಬಾಲಕಿ ಈ ವರ್ಷ ಐಎಸ್‌ಸಿ 12ನೇ ತರಗತಿ ಪರೀಕ್ಷೆಯಲ್ಲಿ ಶೇ.97.75 ಅಂಕ ಗಳಿಸಿದ್ದಾಳೆ. ಉತ್ತರ ಪ್ರದೇಶದ ಲಕ್ನೋ ಮೂಲದ ಪ್ರಮಿತಾ ತಿವಾರಿಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಅಕ್ಯೂಟ್ ಮೈನರ್ ಲ್ಯುಕೇಮಿಯಾ ಇರುವುದು ಪತ್ತೆಯಾಗಿತ್ತು. ಬಹುತೇಕರು ಅವಳ ಭವಿಷ್ಯವು ಕತ್ತಲೆಯಾಗುತ್ತದೆ ಎಂದು ಭಾವಿಸಿದ್ದರು. ಆದರೆ ಈ ಹುಡುಗಿ ಕೆಚ್ಚೆದೆಯ ಹೋರಾಟ … Continued