ವಿಡಿಯೋ | ಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ ; ನೇರ ಆಸ್ಪತ್ರೆಗೆ ಬಸ್‌ ಚಲಾಯಿಸಿಕೊಂಡು ಬಂದು ಸಮಯಪ್ರಜ್ಞೆ ಮೆರೆದ ಚಾಲಕ

ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ, ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯನ್ನು ಪ್ರದರ್ಶಿಸಿ, ಹೃದಯಾಘಾತ ಶಂಕೆಯಿಂದ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ದೊರಕುವಂತೆ ಮಾಡುವ ಮೂಲಕ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ನಡೆದಿದೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣದ ವೇಳೆ ಒಬ್ಬ ಪ್ರಯಾಣಿಕರಿಗೆ ಏಕಾಏಕಿ … Continued

ತುಮಕೂರು : 19 ನವಿಲುಗಳ ನಿಗೂಢ ಸಾವು

ತುಮಕೂರು: 19 ನವಿಲುಗಳು ನಿಗೂಢವಾಗಿ ಸತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ಹನುಮಂಪುರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳ ನವಿಲುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಅದರಲ್ಲಿ, ಐದು ಗಂಡು ಮತ್ತು 14 ಹೆಣ್ಣು ನವಿಲುಗಳಿವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತಪಡಿಸಿದ್ದಾರೆ. ಗ್ರಾಮದ ಕೆರೆ … Continued

ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ

ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ … Continued

ತುಮಕೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ; ಡಿವೈಎಸ್‌ಪಿ ಅಮಾನತು

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಎದುರಿಸುತ್ತಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ನ್ಯ ನಡೆಸಿದ ವೀಡಿಯೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‌ಪಿ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued

ಕರಡಿ ದಾಳಿ: ಮನೆಯ ಮುಂದೆ ಮಲಗಿದ್ದ ವ್ಯಕ್ತಿಗೆ ಗಂಭೀರ ಗಾಯ

ಮಧುಗಿರಿ: ಕರಡಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಮುಂದೆ ಮಲಗಿದ್ದ ಮಲೇರಂಗಪ್ಪ (56) ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ ಮಲೇರಂಗಪ್ಪ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ … Continued